Advertisement

ಹೃದಯಾಘಾತದಿಂದ ಇಬ್ಬರು ಅಧಿಕಾರಿಗಳ ಸಾವು

09:35 AM Apr 24, 2019 | Lakshmi GovindaRaju |

ಸಿರುಗುಪ್ಪ/ಹುಕ್ಕೇರಿ: ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೋವಿಂದಗಿರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪೇಸ್ವಾಮಿ (50) ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸಿರುಗುಪ್ಪದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

Advertisement

ಆದರೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚುವರಿ ಮತಗಟ್ಟೆ ಅಧಿಕಾರಿಯಾಗಿ ನಿಯೋಜಿಸಿ ವಿಶ್ರಾಂತಿ ಪಡೆಯಲು ಸೂಚಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಮತ್ತೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.

ಇನ್ನೊಂದೆಡೆ, ಹುಕ್ಕೇರಿ ತಾಲೂಕಿನ ಯಮನಕಮರಡಿ ಮತಕ್ಷೇತ್ರದ ಕಣವಿಕಟ್ಟಿ ಗ್ರಾಮದ ಮತಗಟ್ಟೆ ನಂ.99 ರಲ್ಲಿ ಚುನಾವಣೆ ಕಾರ್ಯ ನಿರ್ವಹಿಸುತ್ತಿದ್ದ ಪಾಶ್ಚಾಪೂರ ಕಂದಾಯ ಇಲಾಖೆಯ ಗ್ರಾಮ ಸಹಾಯಕ ಸುರೇಶ ಭೀಮಪ್ಪಾ ಸನದಿ (28) ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಮತದಾನ ಕೇಂದ್ರದ ಸಹಾಯಕ ಎಂದು ಕೆಲಸ ನಿರ್ವಹಿಸುತ್ತಿದ್ದ ಅವರು, ಮತದಾರರ ಸಂಖ್ಯೆ ವಿರಳವಿದ್ದ ಸಮಯ ನೋಡಿಕೊಂಡು ತನ್ನ ಮತ ಚಲಾಯಿಸಿ ಕೊಠಡಿಯಿಂದ ಹೊರ ಬರುತ್ತಿರುವಾಗ ಘಟನೆ ಸಂಭವಿಸಿದೆ. ಏ.26ರಂದು ಇವರ ವಿವಾಹ ನಿಶ್ಚಯವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next