Advertisement

ಬಿಹಾರ ವರುಣನ ಆರ್ಭಟ, ಸಾವಿನ ಸಂಖ್ಯೆ 66ಕ್ಕೆ ಏರಿಕೆ; ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ

09:18 AM Oct 03, 2019 | Nagendra Trasi |

ಪಾಟ್ನ: ಧಾರಾಕಾವಾಗಿ ಸುರಿದ ಮಳೆಯಿಂದಾಗಿ ಬಿಹಾರದಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 66ಕ್ಕೆ ಏರಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಮೃತ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Advertisement

ಪಾಟ್ನ ಸೇರಿದಂತೆ ಹಲವಾರು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ನೀರನ್ನು ಖಾಲಿ ಮಾಡುವ ಕಾರ್ಯ ಭರದಿಂದ ಸಾಗಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ. ಪಂಪ್ ಗಳ ಮೂಲಕ ನೀರನ್ನು ಖಾಲಿ ಮಾಡಿದ ಬಳಿಕ ಪಾಟ್ನದಲ್ಲಿ ಚರಂಡಿ ವ್ಯವಸ್ಥೆ ಆರಂಭಿಸಲಾಗುವುದು ಎಂದರು.

ಹವಾಮಾನದ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಸುಮಾರು 12, 13 ಜಿಲ್ಲೆಗಳಲ್ಲಿ ಜಲಪ್ರಳಯದ ಪರಿಸ್ಥಿತಿ ತಲೆದೋರಿದೆ. ಗಂಗಾ ನದಿಯ ನೀರಿನ ಮಟ್ಟ ಕೂಡ ಏರಿಕೆಯಾಗಿದೆ ಎಂದು ನಿತೀಶ್ ಕುಮಾರ್ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next