Advertisement
ಶಿಗ್ಗಾವಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು, ಕೆಲವು ಸ್ಕೀಂಗಳು ಸರಿಯಾಗಿ ನಡೆಯುತ್ತಿವೆ. ದೆಹಲಿಯಲ್ಲಿ ಬಿಜೆಪಿ ಘಟಕದ ಅದ್ಯಕ್ಷರ ಜೊತೆ ಚರ್ಚೆ ಮಾಡಲಾಗುವುದು. ಅಲ್ಲಿ ಏನು ಚರ್ಚೆ ನಡೆಯುತ್ತೋ ಅದನ್ನು ಬಳಿಕವೇ ಹೇಳುತ್ತೇನೆ ಎಂದರು.
Related Articles
Advertisement
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್ ಭೀತಿ ವಿಚಾರ, ಓಪನ್ ಡೋರ್ ನಲ್ಲಿ ಸಮ್ಮೇಳನ ನಡೆಯುವುದರಿಂದ ಮುಂಜಾಗೃತಾ ಕ್ರಮ ತಗೊಳ್ಳಲು ಹೇಳಿದ್ದೇನೆ. ಮಾಸ್ಕ್, ಸ್ಯಾನಿಟೈಸರ್, ಅಂತರ ಕಾಪಾಡಲು ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತ ಎಂದರು.
ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಗಳಿಗೆ ಮೀಸಲಾತಿ ವಿಚಾರಕ್ಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಎಲ್ಲಾ ಮಟ್ಟದಲ್ಲಿ ಚರ್ಚೆ ಆಗಿದೆ ಎಂದರು.
ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ..
ಹಾವೇರಿಯಲ್ಲಿ ಜ.6ರಿಂದ 8ವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಬೇಕು. ಎಲ್ಲಡೆ ಕನ್ನಡದ ಕಂಪು ಹರಡಬೇಕು. ಇತರೆ ಸಮ್ಮೇಳನಕ್ಕಿಂತ ಈ ಸಮ್ಮೇಳನ ಉತ್ಕೃಷ್ಟವಾಗಿರುತ್ತದೆ. ಕನ್ನಡ ಭಾಷೆ, ನೆಲ,ಜಲ ಹಾಗೂ ಜನರನ್ನು ಯಾರು ಮುಟ್ಟಲು ಸಾಧ್ಯವಿಲ್ಲ. ಕನ್ನಡ ನಾಡು ಶ್ರೀಮಂತ ನಾಡು. ಕನ್ನಡ,ಕನ್ನಡಿಗರ ಸಮಸ್ಯೆಗಳನ್ನು ಸಮ್ಮೇಳನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಇದು ಎಲ್ಲ ಕನ್ನಡಿಗರ ಕಾರ್ಯಕ್ರಮವಾಗಿದ್ದು ಎಲ್ಲರೂ ಆಗಮಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.