Advertisement

ವಿಮಾನದಲ್ಲಿ ‘ಬಾಂಬ್’ ಬಗ್ಗೆ ಚರ್ಚೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

12:59 PM Jun 09, 2023 | Team Udayavani |

ಹೊಸದಿಲ್ಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಯಿಗಿದೆ.

Advertisement

ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಂಧಿತನು ದೂರವಾಣಿ ಸಂಭಾಷಣೆಯ ವೇಳೆ ‘ಬಾಂಬ್’ ಬಗ್ಗೆ ಮಾತನಾಡಿದ್ದು, ಇದನ್ನು ಆತನ ಸಹ ಪ್ರಯಾಣಿಕನು ಕೇಳಿಸಿಕೊಂಡಿದ್ದಾನೆ. ಜೂನ್ 7 ರಂದು (ಬುಧವಾರ) ಈ ಘಟನೆ ನಡೆದಿದೆ.

ಆರೋಪಿಯನ್ನು ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಜೀಂ ಖಾನ್ ಎಂದು ಗುರುತಿಸಲಾಗಿದೆ. ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದೆಹಲಿಯಿಂದ ಮುಂಬೈಗೆ ಸಂಪರ್ಕ ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದರು.

ಆರೋಪಿ ‘ಬಾಂಬ್’ ಬಗ್ಗೆ ಫೋನ್ ಮೂಲಕ ಮಾತನಾಡುವುದನ್ನು ಮಹಿಳೆ ಕೇಳಿಸಿ ಕೊಂಡಿದ್ದಾರೆ. ತಕ್ಷಣ ಅವರು ವಿಮಾನದಲ್ಲಿದ್ದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಜಿಯೋ ಸಿನಿಮಾ ಪ್ರಭಾವ: ಕ್ರಿಕೆಟ್ ಅಭಿಮಾನಿಗಳಿಗೆ ಗಿಫ್ಟ್ ಕೊಟ್ಟ ಹಾಟ್ ಸ್ಟಾರ್

Advertisement

ಮಹಿಳೆಯ ದೂರಿನ ಆಧಾರದ ಮೇಲೆ, ಸಿಬ್ಬಂದಿಗಳು ಆರೋಪಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಹಸ್ತಾಂತರಿಸಿದರು, ನಂತರ ದೆಹಲಿ ಪೊಲೀಸರು ಆತನನ್ನು ಬಂಧಿಸಿದರು. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next