Advertisement

ಸಾಲಮನ್ನಾ: ರೈತರು ನೋಂದಾಯಿಸಿಕೊಳ್ಳಲು ಡೀಸಿ ಮನವಿ

11:21 AM Dec 16, 2018 | Team Udayavani |

ಮೈಸೂರು: ರಾಜ್ಯ ಸರ್ಕಾರವು ವಾಣಿಜ್ಯ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲಮನ್ನಾ ಮಾಡುವ ಸಲುವಾಗಿ ಒಂದು ತಂತ್ರಾಂಶವನ್ನು ತಂದಿದ್ದು, ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ಸಾಲ ಪಡೆದ ವಾಣಿಜ್ಯ ಬ್ಯಾಂಕ್‌ಗಳಲ್ಲಿ ಜ.10ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಮನವಿ ಮಾಡಿದ್ದಾರೆ. 

Advertisement

2009ರ ಏಪ್ರಿಲ್‌ 1 ರ ನಂತರ ಮಂಜೂರಾದ ಬೆಳೆ ಸಾಲಗಳು ಮತ್ತು 2017ರ ಡಿಸೆಂಬರ್‌ 31ರ ವರೆಗೆ ಬಾಕಿ ಇರುವ ಬೆಳೆ ಸಾಲಗಳು ಸಾಲ ಮನ್ನಾಗೆ ಅರ್ಹವಾಗಿವೆ. ಇದರಲ್ಲಿ ಸುಸ್ತಿ ಸಾಲ, ಪುನರಾವರ್ತಿ ಸಾಲ, ಎನ್‌ಪಿಎ ಸಾಲಗಳು ಅರ್ಹವಾಗಿರುತ್ತವೆ. ಒಂದು ಕುಟುಂಬ ಗರಿಷ್ಠ 2 ಲಕ್ಷ ರೂ.ವರೆಗೆ ಮಾತ್ರ ಬೆಳೆ ಸಾಲ ಮನ್ನಾ ಪಡೆಯಲು ಅರ್ಹರಿದ್ದು, 5 ಜುಲೈ 2018ಕ್ಕಿಂತ ಮುಂಚಿತವಾಗಿ ಪಡೆದ ರೇಷನ್‌ ಕಾರ್ಡ್‌ನ್ನು ಕಡ್ಡಾಯವಾಗಿ ಸಲ್ಲಿಸುವವರನ್ನು ಮಾತ್ರ ಪರಿಗಣಿಸಲಾಗುವುದು  ಎಂದು ಅವರು ತಿಳಿಸಿದ್ದಾರೆ. 

ಒಂದು ಬ್ಯಾಂಕ್‌ ಶಾಖೆಯಲ್ಲಿ ಪ್ರತಿದಿನ ಕನಿಷ್ಠ 40 ರೈತರ ಹೆಸರ‌ನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ತದನಂತರದ ರೈತರಿಗೆ ಕ್ರಮಬದ್ಧವಾಗಿ ಕ್ರಮ ಸಂಖ್ಯೆ ಮತ್ತು ದಿನಾಂಕ ನಮೂದಿಸಿ ಟೋಕನ್‌ಗಳನ್ನು ನೀಡಿದ ದಿನಾಂಕಗಳಂದು ರೈತರು ಬ್ಯಾಂಕ್‌ ಶಾಖೆಗೆ ತೆರಳಿ ರೈತರ ಸಯಂ ದೃಢೀಕರಣ ಪತ್ರದೊಂದಿಗೆ ಆಧಾರ್‌ ಕಾರ್ಡ್‌, ಪಡಿತರ ಚೀಟಿಗಳ ನಕಲು ಮತ್ತು ಭೂಮಿಯ ಸರ್ವೆ ನಂಬರ್‌ ವಿವರಗಳನ್ನು ಒದಗಿಸಬೇಕು. 

ಯಾವ ರೈತರು ವಾರ್ಷಿಕ ಆದಾಯ ತೆರಿಗೆ ಪಾವತಿದಾರರೋ ಮತ್ತು ರಾಜ್ಯ, ಕೇಂದ್ರ ಸರ್ಕಾರಿ, ಅರೆ ಸರ್ಕಾರಿ, ಸರ್ಕಾರದಿಂದ ಅನುದಾನಕ್ಕೊಳಪಡುವ ಸಂಸ್ಥೆಗಳಲ್ಲಿ, ಸಾರ್ವಜನಿಕ ಸ್ವಾಮ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 15 ಸಾವಿರ ರೂ.ಗಳಿಗಿಂತ ಹೆಚ್ಚು ಪಿಂಚಣಿ ಪಡೆಯುವ ನಿವೃತ್ತ ನೌಕರರು ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಬೆಳೆ ಸಾಲಮನ್ನಾ ಫ‌ಲಾನುಭವಿಗಳು ವಾಣಿಜ್ಯ ಬ್ಯಾಂಕ್‌ ಬೆಳೆಸಾಲ ಮನ್ನಾ ಯೋಜನೆಯಡಿ ಅರ್ಹರಿರುವುದಿಲ್ಲ.

ಸಹಾಯವಾಣಿ: ಪ್ರತಿ ಬ್ಯಾಂಕ್‌ ಶಾಖೆಯಲ್ಲಿ ಒಬ್ಬ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪೊಲೀಸ್‌ ಬಂದೋಬಸ್ತ್ ಕೂಡ ನೀಡಲಾಗಿದ್ದು, ರೈತರಿಗೆ ಯಾವುದಾದರೂ ಗೊಂದಲ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ 0821-2423800 ಸಂಪರ್ಕಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Advertisement

ಬ್ಯಾಂಕ್‌ನೊಂದಿಗೆ ಸಹಕರಿಸಿ: ಅರ್ಹ ರೈತರಿಗೆ ಸಾಲ ಮನ್ನಾ ಯೋಜನೆಯಡಿ ತಮ್ಮ ಬ್ಯಾಂಕ್‌ ಶಾಖೆಗಳಲ್ಲಿ ನೋಂದಾಯಿಸಿಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಲಾಗಿದ್ದು, ರೈತರು ಯಾವುದೇ ಗೊಂದಲಗಳಿಗೆ ಒಳಗಾಗದೇ ಶಾಂತ ರೀತಿಯಿಂದ ತಮ್ಮ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಹಕರಿಸಿ ಇದರ ಲಾಭವನ್ನು ಪಡೆಕೊಳ್ಳಬಹುದು.

Advertisement

Udayavani is now on Telegram. Click here to join our channel and stay updated with the latest news.