Advertisement

ಸಾಲ ಯೋಜನೆ ಉದ್ಯೋಗಾವಕಾಶಕ್ಕೆ ಉತ್ತಮ ಹೆಜ್ಜೆ

02:58 PM Feb 09, 2021 | Team Udayavani |

ಬಳ್ಳಾರಿ: ಸ್ಟಾರ್ಟ್‌ ಅಪ್‌ ಟು ಸೆಲ್‌  ಎಂಪ್ಲಾಯ್ಮೆಂಟ್‌ ಎಂಬ ಸುಕೋ ಬ್ಯಾಂಕ್‌ನ ವಿಶೇಷ ಸಾಲ ಯೋಜನೆಯು ಉದ್ಯೋಗಾವಕಾಶಗಳ ನಿರ್ಮಾಣಕ್ಕೆ ಅತ್ಯುತ್ತಮ ಹೆಜ್ಜೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ| ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು. ಬೆಂಗಳೂರು ನಗರದಿಂದ ವರ್ಚುವಲ್‌ ಮೂಲಕ ಸುಕೋಬ್ಯಾಂಕ್‌ನ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು ಎನ್ನುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ. 10 ಲಕ್ಷ ಉದ್ಯೋಗಾವಕಾಶಗಳನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ.

Advertisement

ಸ್ಟಾರ್ಟ್‌-ಅಪ್‌ಗ್ಳ ಉದ್ಯಮದಲ್ಲಿಪಾಲ್ಗೊಳ್ಳಲು ಅವಕಾಶ ನೀಡುವುದು, ಅದಕ್ಕೆ ಬೇಕಾದ  ತರಬೇತಿ ಹಾಗೂ ಉದ್ಯಮ ಪ್ರಾರಂಭಿಸಬೇಕುಎನ್ನುವವರಿಗೆ ಹೊಸ ಯೋಜನೆಗಳನ್ನು ತಲುಪಿಸುವುದು ಅತ್ಯುತ್ತಮ ಕಲ್ಪನೆಯಾಗಿದೆ. ಇದರಿಂದ ಸ್ಟಾರ್ಟ್‌-ಅಪ್‌ ಗಳ ವ್ಯವಹಾರ ಹೆಚ್ಚಾಗುವುದಲ್ಲದೆ, ಗ್ರಾಮೀಣ ಪ್ರದೇಶ ಹಾಗೂ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ಇದು ಅತ್ಯುತ್ತಮ ಯೋಜನೆಯಾಗಿದ್ದು ರಾಜ್ಯ ಸರ್ಕಾರದ ವತಿಯಿಂದ ಅಗತ್ಯವಿರುವ ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಬಳ್ಳಾರಿಯಿಂದ ಆನ್‌ಲೈನ್‌ ಮೂಲಕ ಯೋಜನೆಗೆ ಚಾಲನೆ ನೀಡಿದ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಮನೋಹರ್‌ ಮಸ್ಕಿ ಮಾತನಾಡಿ, ನಮ್ಮ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಹೊಸ ರೀತಿಯ ಯೋಜನೆಯನ್ನು ಪ್ರಾರಂಭಿಸಲಾಗಿದೆ. 12 ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಸಣ್ಣ ಸಾಲಗಳನ್ನು ನೀಡುವ ಜನರ ಸಹಾಯಕ್ಕೆ ಮುಂದಾಗಿದ್ದೇವು. ಸ್ಟಾರ್ಟ್‌ ಅಪ್‌ ಕಂಪನಿಗಳಿಗೆ ಹಣಕಾಸಿನ ಸಹಾಯ ಒದಗಿಸಿ, ಅವರ ಮೂಲಕ ಅವರ ಉತ್ಪನ್ನಗಳನ್ನು ಬಳಸುವವರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ನಾಡಿನ ಜನರಿಗೆಆರೋಗ್ಯ ಸೇವೆಗಳು, ಆರೋಗ್ಯಯುತ ಆಹಾರ ಹಾಗೂ ಪರಿಸರ ಸಂರಕ್ಷಣೆಗೆ ಸಣ್ಣ ಸೇವೆ ನೀಡುವುದು  ನಮ್ಮ ಉದ್ದೇಶವಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಸಿ. ಪಾಟೀಲ್‌ ರೇವೂರ್‌ ಕಲುºರ್ಗಿಯಿಂದಲೇ ಆನ್‌ಲೈನ್‌ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾಡಿನ ಯುವಜನರು ನೌಕರಿಗಳಿಗಾಗಿ ಹುಡುಕಾಡದೆ ಇಂಥ ಯೋಜನೆಗಳ ಲಾಭವನ್ನು ಪಡೆದುಕೊಂಡು ಸ್ವಯಂ ಉದ್ಯೋಗ ಆರಂಭಿಸಿ ತಾವೂ ಬೆಳದು ಇತರೆ ಯುವಜನರಿಗೆ ಉದ್ಯೋಗಗಳನ್ನು ಸೃಷ್ಟಿಸಬೇಕೆಂದು ಕರೆ ನೀಡಿದರು.

ಸುಕೋಬ್ಯಾಂಕಿನ ಅಧ್ಯಕ್ಷ ಮೋಹಿತ ಮಸ್ಕಿ ಮಾತನಾಡಿ, ಸುಕೋ ಬ್ಯಾಂಕ್‌ ಯಾವಾಗಲೂ ವಿಶಿಷ್ಟ ಹಾಗೂ ವಿನೂತನ ಗ್ರಾಹಕಸ್ನೇಹಿ ಯೋಜನೆಗಳನ್ನು ರೂಪಿಸಿ ಜನರಿಗೆ ತಲುಪುವಂತೆ ಮಾಡುತ್ತಿದೆ. ತಂತ್ರಜ್ಞಾನವನ್ನು ಬಳಸುವಲ್ಲಿ ಸಹಕಾರಿ ಕ್ಷೇತ್ರದಲ್ಲಿ ಯಾವಾಗಲೂ ಮುಂಚೂಣಿ ಬ್ಯಾಂಕಾಗಿ ಅಭಿವೃದ್ಧಿ ಹೊಂದುತ್ತಿದೆ. ಇಂದಿನ ಆನ್‌ಲೈನ್‌ ಮೂಲಕ ಯೋಜನೆ ಪ್ರಾರಂಭಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಈ ವಿಶೇಷ ಯೋಜನೆಯಿಂದ ಸುಮಾರು 500ಕ್ಕೂ ಹೆಚ್ಚಿನ ಯುವಕ-ಯುವತಿಯರ ಸ್ವಾವಲಂಬನೆ ಬದುಕಿಗೆ ನೆರವಾಗಲಿದೆ.

Advertisement

ಇದನ್ನೂ ಓದಿ:ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ

“ಸ್ವಉದ್ಯೋಗಕ್ಕಾಗಿ ಸ್ಟಾರ್ಟ್‌ ಅಪ್‌ ಯೋಜನೆಯನ್ನು ಸುಕೋಬ್ಯಾಂಕ್‌ ರೂಪಿಸಿರುವ “ಸ್ಟಾರ್ಟ್‌ ಅಪ್‌ ಸೆಲ್‌  ಎಂಪ್ಲಾಯ್ಮೆಂಟ್‌ ವಿಶೇಷ ಸಾಲಯೋಜನೆ ಅಡಿಯಲ್ಲಿ ಸಾಲ ನೀಡುವ ಪ್ರಕ್ರಿಯನ್ನುಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದರು. ಪ್ರಾಂಚೈಸಿ ನವೀನ್‌ ಶೆಟ್ಟಿ ಅವರಿಗೆ ಯೋಜನೆಯ ಮೊದಲ ಫಲಾನುಭವಿ ಪ್ರಮಾಣ ಪತ್ರವನ್ನು ನೀಡಲಾಯಿತು. ಬನಶ್ರೀ ಸಿಸ್ಟಂ ಪ್ರೈ.ಲಿ.ನ ಬ್ಯಾಟ್‌-ಪ್ಲೇಪ್ರಾಂಚೈಸಿಯ ಮೊದಲ ಫಲಾನುಭವಿಯಾಗಿ ಸುನೀಲ್‌ ಕುಮಾರ್‌ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next