Advertisement
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಂತರ ಸೂಪರ್ ಮಾರ್ಕೆಟ್ ರಸ್ತೆಯಲ್ಲಿರುವ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರ (ಡಿಸಿಸಿ) ಬ್ಯಾಂಕ್‌ಗೆ ತೆರಳಿ ಮುತ್ತಿಗೆ ಹಾಕಿದರು.
Related Articles
Advertisement
ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ: ಜಿಲ್ಲೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು. ಆಳಂದ ಬಿಜೆಪಿ ಯುವ ಮುಖಂಡ ರಾಹುಲ್ ಬೀಳಗಿ ಹತ್ಯೆ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಬೇಕು ಹಾಗೂ ರಾಹುಲ್ ಬೀಳಗಿ ಕುಟುಂಬದವರಿಗೆ ಭದ್ರತೆ ನೀಡಬೇಕು. ವಿವಿಧ ಇಲಾಖೆಗಳಿಂದ ಮಂಜೂರಾದ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರ ಹಾಗೂ ಭೂಸೇನಾ ನಿಗಮಕ್ಕೆ ವಹಿಸಲಾಗಿದ್ದು, ಕಾಮಗಾರಿಗಳು ವಿಳಂಬ ಹಾಗೂ ಕಳಪೆ ಮಟ್ಟದ್ದಾಗಿದ್ದು, ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳಬೇಕು. ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಎಂಬಿಸಿ ಹಾಗೂ ಜೆಬಿಸಿ ಕಾಲುವೆಗಳಿಂದ ಅಚ್ಚುಕಟ್ಟು ಪ್ರದೇಶಗಳಿಗೆ ನಿಯಮಿತವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಮಾಜಿ ಸಚಿವರಾದ ಮಾಲೀಕಯ್ಯ ವಿ. ಗುತ್ತೇದಾರ್, ಬಾಬುರಾವ ಚವ್ಹಾಣ, ಮಾಜಿ ಶಾಸಕ ವಾಲ್ಮೀಕಿ ನಾಯಕ, ಜಿಪಂ ಅಧ್ಯಕ್ಷೆ ಸುವರ್ಣಾ ಎಚ್.ಮಲಾಜಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಮುಖಂಡರಾದ ರವಿ ಬಿರಾದಾರ, ಶರಣು ಸಲಗರ, ಸಂಗಮೇಶ ನಾಗನಹಳ್ಳಿ, ಸಿದ್ದಾಜಿ ಪಾಟೀಲ, ಮಹಾದೇವ ಬೆಳಮಗಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ, ವಾಲ್ಮೀಕಿ ನಾಯಕ ಹಾಗೂ ಹಲವು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಜಿಲ್ಲೆಯಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಹೀಗಾಗಿ ನದಿ ಪಾತ್ರಗಳೆಲ್ಲ ಬರಿದಾಗಿ ಕುಡಿಯುವ ನೀರಿನ ಆಹಾಕಾರ ಎದುರಾಗಿದೆ. ಮರಳುಗಾರಿಕೆಯಲ್ಲಿ ಪೊಲೀಸ್ ಇಲಾಖೆಯೇ ಕೈಜೋಡಿಸಿದೆ. ಜಿಲ್ಲೆಯಲ್ಲಿ ಬರಗಾಲ ಆವರಿಸಿದ್ದರೂ ಆಳಂದ ತಾಲೂಕನ್ನು ಮಾತ್ರ ಬರ ಪ್ರದೇಶಗಳ ವ್ಯಾಪ್ತಿಗೆ ಸೇರಿಸದೆ ಅನ್ಯಾಯ ಮಾಡಲಾಗಿದೆ. ಸತ್ತವರ ಹೆಸರಲ್ಲಿ ರೈತರ ಸಾಲ ಮನ್ನಾ ಮಾಡಿ ಅವ್ಯವಹಾರ ನಡೆಸಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಬೇಕು ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ
ಜೇವರ್ಗಿ ಡಿಸಿಸಿ ಬ್ಯಾಂಕ್‌ನ ಮೂವರ ಅಮಾನತುಕಲಬುರಗಿ: ಹಣ ಪಡೆದೇ ರೈತರಿಗೆ ಸಾಲದ ಹಣ ಹಾಗೂ ಸಾಲ ಮನ್ನಾ ಹಣವನ್ನು ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎನ್ನುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಜೇವರ್ಗಿ ಶಾಖೆಯ ಮೇಲ್ವಿಚಾರಕ ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ರೈತರಿಂದ ಹಣ ಪಡೆದು ಸಾಲದ ಹಣ ಪಾವತಿ ಮಾಡುತ್ತಿರುವುದಲ್ಲದೇ ಬ್ಯಾಂಕ್‌ನಲ್ಲಿ ಇತರ ವ್ಯವಹಾರಗಳಲ್ಲೂ ಸಾಕಷ್ಟು ಅವ್ಯವಹಾರ ನಡೆದಿರುವುದನ್ನು ಪರಿಗಣಿಸಿ ಶಾಖೆ ಮೇಲ್ವಿಚಾರಕ ಹಣಮಂತರಾಯ ದೊರೆ, ಶಾಖಾ ವ್ಯವಸ್ಥಾಪಕ ಮಹಾಂತೇಶ ಕುಂಬಾರ ಹಾಗೂ ಸಿಪಾಯಿ ಕ್ಷೀರಲಿಂಗಯ್ಯ ಹಿರೇಮಠ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಡಿಸಿಸಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಚವ್ಹಾಣ ಆದೇಶ ಹೊರಡಿಸಿದ್ದಾರೆ.