Advertisement

ಸಾಲ ಮನ್ನಾ ಯೋಜನೆಯಿಂದ ಕೃಷಿಗೆ ಹಿನ್ನಡೆ!

07:35 AM Jul 31, 2018 | |

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ರೈತರ ಬೆಳೆ ಸಾಲ ಮನ್ನಾ ಯೋಜನೆ ಪ್ರಸಕ್ತ ಸಾಲಿನಲ್ಲಿ ಕೃಷಿ ಚಟುವಟಿಕೆಗಳ ಹಿನ್ನಡೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ಅಧಿಕಾರಿಗಳು ಈ ವಿಚಾರವನ್ನು ತಂದಿದ್ದಾರೆ.

ಸರ್ಕಾರ ಸಾಲ ಮನ್ನಾ ಯೋಜನೆ ಘೋಣೆ ಮಾಡಿದೆಯೇ ಹೊರತು ಅದು ಇನ್ನೂ ರೈತರಿಗೆ ತಲುಪಿಲ್ಲ. ಇನ್ನೊಂದೆಡೆ ಸಾಲ ಮನ್ನಾ ಆಗುತ್ತದೆ ಎಂಬ ಕಾರಣಕ್ಕೆ ರೈತರು ತಮ್ಮ ಸಾಲ ಮರು ಪಾವತಿ ಮಾಡಿಲ್ಲ ಮತ್ತು ನವೀಕರಿಸಿಯೂ ಇಲ್ಲ. ಇದರಿಂದ ರೈತರು ಹೊಸ ಸಾಲ ಪಡೆದುಕೊಳ್ಳಲು ಸಾಧ್ಯವಾಗದೆ ಕೃಷಿ ಚಟುವಟಿಕೆಗಳು ವಿಳಂಬವಾಗಿದೆ. ಪರಿಣಾಮ ಕಳೆದ ಸಾಲಿಗಿಂತ ಪ್ರಸ್ತಕ ತಿಂಗಳ ಕೃಷಿ ಪ್ರಗತಿ ಕುಂಠಿತವಾಗಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ತಕ್ಷಣ ಕೃಷಿ ಮತ್ತು ಸಹಕಾರ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next