Advertisement

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

10:13 AM Dec 18, 2024 | Team Udayavani |

ಮಂಗಳೂರು: ಕೆಲವಾರು ವರ್ಷಗಳ ಬಳಿಕ ಇದೇ ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವʼ ನಮ್ಮ ತುಳುನಾಡಿನ ರಾಜಧಾನಿಯಲ್ಲಿ ಮೈದಳೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿರುವ ಈ ಉತ್ಸವದಲ್ಲಿ ಕರಾವಳಿಯ ವೈವಿಧ್ಯತೆಗಳು ಸಾರ್ವಜನಿಕರನ್ನು ರಂಜಿಸಲಿವೆ.

Advertisement

ಡಿಸೆಂಬರ್ 21 ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಸಂಜೆ 4 ಗಂಟೆಗೆ ಕೊಡಿಯಾಲ್ ಬೈಲ್ ನ ಕೆನರಾ ಕಾಲೇಜಿನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಕಲಾವಿದರ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಸಂಜೆ 5.30 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಈ ಬಾರಿಯ ಕರಾವಳಿ ಉತ್ಸವಕ್ಕೆ ಚಾಲನೆ ದೊರೆಯಲಿದೆ.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಿಸೆಂಬರ್ 21 ಮತ್ತು 22 ರಂದು ವಿದ್ಯುದ್ದೀಪಗಳಿಂದ ಅಲಂಕೃತವಾದ ವೇದಿಕೆಯಲ್ಲಿ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ.

ವಸ್ತು ಪ್ರದರ್ಶನ ‘ಜಾಗತಿಕ ಹಳ್ಳಿ” (Global Village) ಎಂಬ ಧೈಯದೊಂದಿಗೆ ಕರಾವಳಿಯ ನೈಜ ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಉಡುಗೆ ತೊಡುಗೆ ಮತ್ತು ಖಾದ್ಯಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. ವಿವಿಧ ಜನಾಂಗದ ರೀತಿ ರಿವಾಜುಗಳನ್ನು ಪರಿಚಯಿಸಲು ಪ್ರತ್ಯೇಕ ವಿಭಾಗಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲಿ ಕೈಮಗ್ಗ, ನೇಕಾರ, ಕುಂಬಾರ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲ್ಯಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳ ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಕುಂಬಾರ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲ್ಯಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳ ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ.

Advertisement

ಆಹಾರ ಮೇಳ

ಕರಾವಳಿಯು ತನ್ನದೇ ಆದ ವಿಶಿಷ್ಟ ಆಹಾರ ಪದ್ದತಿಯನ್ನು ಹೊಂದಿದೆ. ವೈವಿಧ್ಯಮಯ ಖಾದ್ಯಗಳ ತಯಾರಿಕೆ, ಪ್ರದರ್ಶನ ಮತ್ತು ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದ್ದು, ತುಳುನಾಡಿನ ತಿಂಡಿ ತಿನಿಸುಗಳನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸವಿಯಲು ಸಾರ್ವಜನಿಕರಿಗೆ ಇದೊಂದು ಅಪರೂಪದ ಅವಕಾಶವಾಗಿದೆ.

ವಾಣಿಜ್ಯ ಮಳಿಗೆ

ಆಹಾರ ಉತ್ಪನ್ನಗಳು ಮಾತ್ರವಲ್ಲದೆ ಉಡುಗೆ ತೊಡುಗೆಗಳು ಮತ್ತು ವಿವಿಧ ವಾಣಿಜ್ಯ ಮಳಿಗೆಗಳಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ವಿವಿಧ ವಿನೋದಾವಳಿಗಳು ಎಲ್ಲಾ ವಯಸ್ಸಿನವರೆಗೂ ಮನೋರಂಜನೆ ನೀಡಲಿವೆ.

ಬೀಚ್ ಉತ್ಸವ

ಡಿಸೆಂಬರ್ 28 ಮತ್ತು 29ರಂದು ತಣ್ಣೀರು ಬಾವಿ ಬೀಚ್ ನಲ್ಲಿ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 6 ಗಂಟೆಗೆ ಬೀಚ್ ಉತ್ಸವ ಉದ್ಘಾಟನೆಗೊಳ್ಳಲಿದೆ. ಸಂಜೆ 6.30 ರಿಂದ ವಿವಿಧ ತಂಡಗಳ ನೃತ್ಯ ಪ್ರದರ್ಶನಗಳು ನಡೆಯಲಿವೆ. ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕರು ಮತ್ತು ಗಾಯಕ ರಘು ದೀಕ್ಷಿತ್ ಅವರ ತಂಡದ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದ್ದು, ಸಾರ್ವಜನಿಕರನ್ನು ರಂಜಿಸಲಿದೆ.

ಭಾನುವಾರ ಡಿ.29 ರಂದು ಬೆಳಿಗ್ಗೆ 5.30ಕ್ಕೆ ಯೋಗ, 6.30ಕ್ಕೆ ಜುಂಬ (ಏರೋನಾಟಿಕ್ಸ್) ಮತ್ತು 9 ಗಂಟೆಯಿಂದ ಬೀಚ್ ಸ್ಪೋರ್ಟ್ಸ್ ಮುಂತಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಆನ್ಸೆನ್ ಸ್ಪರ್ಧೆ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ ಮತ್ತು ರಾತ್ರಿ 8 ಗಂಟೆಗೆ ಶೋರ್ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ. ಯುವ ಜನತೆಗೆ ಇದೊಂದು ವಿಶಿಷ್ಟ ಅವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.

ಇತರೆ ವೈಶಿಷ್ಟ್ಯಗಳು

ಜನವರಿ 4 ಮತ್ತು 5 ರಂದು ಕದ್ರಿ ಪಾರ್ಕ್ ನಲ್ಲಿ ಆಟೋಮೊಬೈಲ್ ಮತ್ತು ಶ್ವಾನ ಪ್ರದರ್ಶನ ನಡೆಯಲಿದೆ.

ಜನವರಿ 11 ಮತ್ತು 12 ರಂದು ಕದ್ರಿ ಪಾರ್ಕ್ ನಲ್ಲಿ ಯುವ ಉತ್ಸವ ನಡೆಯಲಿದೆ.

ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ಸುಪ್ರಸಿದ್ದ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next