Advertisement
ಡಿಸೆಂಬರ್ 21 ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಸಂಜೆ 4 ಗಂಟೆಗೆ ಕೊಡಿಯಾಲ್ ಬೈಲ್ ನ ಕೆನರಾ ಕಾಲೇಜಿನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಕಲಾವಿದರ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಸಂಜೆ 5.30 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಈ ಬಾರಿಯ ಕರಾವಳಿ ಉತ್ಸವಕ್ಕೆ ಚಾಲನೆ ದೊರೆಯಲಿದೆ.
Related Articles
Advertisement
ಆಹಾರ ಮೇಳ
ಕರಾವಳಿಯು ತನ್ನದೇ ಆದ ವಿಶಿಷ್ಟ ಆಹಾರ ಪದ್ದತಿಯನ್ನು ಹೊಂದಿದೆ. ವೈವಿಧ್ಯಮಯ ಖಾದ್ಯಗಳ ತಯಾರಿಕೆ, ಪ್ರದರ್ಶನ ಮತ್ತು ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದ್ದು, ತುಳುನಾಡಿನ ತಿಂಡಿ ತಿನಿಸುಗಳನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸವಿಯಲು ಸಾರ್ವಜನಿಕರಿಗೆ ಇದೊಂದು ಅಪರೂಪದ ಅವಕಾಶವಾಗಿದೆ.
ವಾಣಿಜ್ಯ ಮಳಿಗೆ
ಆಹಾರ ಉತ್ಪನ್ನಗಳು ಮಾತ್ರವಲ್ಲದೆ ಉಡುಗೆ ತೊಡುಗೆಗಳು ಮತ್ತು ವಿವಿಧ ವಾಣಿಜ್ಯ ಮಳಿಗೆಗಳಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ವಿವಿಧ ವಿನೋದಾವಳಿಗಳು ಎಲ್ಲಾ ವಯಸ್ಸಿನವರೆಗೂ ಮನೋರಂಜನೆ ನೀಡಲಿವೆ.
ಬೀಚ್ ಉತ್ಸವ
ಡಿಸೆಂಬರ್ 28 ಮತ್ತು 29ರಂದು ತಣ್ಣೀರು ಬಾವಿ ಬೀಚ್ ನಲ್ಲಿ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 6 ಗಂಟೆಗೆ ಬೀಚ್ ಉತ್ಸವ ಉದ್ಘಾಟನೆಗೊಳ್ಳಲಿದೆ. ಸಂಜೆ 6.30 ರಿಂದ ವಿವಿಧ ತಂಡಗಳ ನೃತ್ಯ ಪ್ರದರ್ಶನಗಳು ನಡೆಯಲಿವೆ. ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕರು ಮತ್ತು ಗಾಯಕ ರಘು ದೀಕ್ಷಿತ್ ಅವರ ತಂಡದ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದ್ದು, ಸಾರ್ವಜನಿಕರನ್ನು ರಂಜಿಸಲಿದೆ.
ಭಾನುವಾರ ಡಿ.29 ರಂದು ಬೆಳಿಗ್ಗೆ 5.30ಕ್ಕೆ ಯೋಗ, 6.30ಕ್ಕೆ ಜುಂಬ (ಏರೋನಾಟಿಕ್ಸ್) ಮತ್ತು 9 ಗಂಟೆಯಿಂದ ಬೀಚ್ ಸ್ಪೋರ್ಟ್ಸ್ ಮುಂತಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಆನ್ಸೆನ್ ಸ್ಪರ್ಧೆ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ ಮತ್ತು ರಾತ್ರಿ 8 ಗಂಟೆಗೆ ಶೋರ್ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ. ಯುವ ಜನತೆಗೆ ಇದೊಂದು ವಿಶಿಷ್ಟ ಅವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.
ಇತರೆ ವೈಶಿಷ್ಟ್ಯಗಳು
ಜನವರಿ 4 ಮತ್ತು 5 ರಂದು ಕದ್ರಿ ಪಾರ್ಕ್ ನಲ್ಲಿ ಆಟೋಮೊಬೈಲ್ ಮತ್ತು ಶ್ವಾನ ಪ್ರದರ್ಶನ ನಡೆಯಲಿದೆ.
ಜನವರಿ 11 ಮತ್ತು 12 ರಂದು ಕದ್ರಿ ಪಾರ್ಕ್ ನಲ್ಲಿ ಯುವ ಉತ್ಸವ ನಡೆಯಲಿದೆ.
ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ಸುಪ್ರಸಿದ್ದ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ.