ಪಡುಬಿದ್ರಿ: ಬಂಟರ ಸಂಘ ಪಡುಬಿದ್ರಿ ಹಾಗೂ ಬಂಟ್ಸ್ ವೆಲೇರ್ ಟ್ರಸ್ಟ್ ವತಿಯಿಂದ ಡಿ. 29ರಂದು ಬಂಟರ ಭವನದ ಸಮೀಪದ ದಿ| ರಮೇಶ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ಎಂ.ಆರ್.ಜಿ ಟ್ರೋಫಿ ೨೦೨೪ ನಡೆಯಲಿದೆ ಬಂಟರ ಸಂಘದ ಅಧ್ಯಕ್ಷ ಐಕಳಭಾವ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಪಡುಬಿದ್ರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜಾತಿ ಮತ ಭೇದವಿಲ್ಲದೆ ಸಮಾಜದ ಸರ್ವರಿಗೂ ನಿರಂತರ ಸಹಾಯ ಹಸ್ತ ನೀಡುತ್ತಾ ಸಮಾಜ ಸೇವೆಗೆ ತನ್ನನ್ನು ತಾನು ಸಮರ್ಪಿಸಿರುವ ಬಂಟ ಸಮಾಜದ ಕಣ್ಮಣಿ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರ ಸಹಕಾರ ಮತ್ತು ಪ್ರಾಯೋಜಕತ್ವದೊಂದಿಗೆ ಎಂ ಆರ್ ಜಿ ಟ್ರೋಫಿ 2024 ಎಂಬ ಲಾಂಛನದೊಂದಿಗೆ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ನಡೆಯಲಿದ್ದು ಡಾ| ಕೆ. ಪ್ರಕಾಶ್ ಶೆಟ್ಟಿ ಅವರು ಪಂದ್ಯಾಕೂಟವನ್ನು ಉದ್ಘಾಟಿಸಲಿದ್ದು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕ್ರೀಡಾಕೂಟದ ಧ್ವಜಾರೋಹಣಗೈಯ್ಯಲಿದ್ದಾರೆ ಎಂದರು.
ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಮುಂಬಯಿಯ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಬಂಟ ಸಾಧಕ ಪ್ರಶಸ್ತಿ ಪುರಸ್ಕಾರ ನೀಡಿ ಸಮ್ಮಾನಿಸಲಾಗುವುದು. ಯು.ಪಿ.ಸಿ.ಎಲ್ – ಅದಾನಿ ಅಧ್ಯಕ್ಷ ಕಿಶೋರ್ ಆಳ್ವ, ಮುಂಬಯಿ ಉದ್ಯಮಿ ಕೆ.ಎಂ. ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಪುಣೆಯ ಉದ್ಯಮಿ ಚಂದ್ರಹಾಸ ಶೆಟ್ಟಿ ಪುಚ್ಚೊಟ್ಟುಬೀಡು, ಮುಂಬಯಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಅವರು ವಿವಿಧ ಕ್ರೀಡಾಂಗಣಗಳ ಉದ್ಘಾಟನೆ ಮಾಡಲಿರುವರು. ಪುಣೆಯ ಉದ್ಯಮಿ ಸೀತಾರಾಮ ಶೆಟ್ಟಿ ಪುಚ್ಚೊಟ್ಟುಬೀಡು ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಿರುವರು. ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷೆ ಶಶಿಕಲಾ ಪೂಜಾರಿ, ವಿವಿಧ ಸಂಘ ಸಂಸ್ಥೆಗಳ ಮತ್ತು ರಾಜ್ಯ ಅಂತರ್ ರಾಜ್ಯ ಬಂಟರ ಸಂಘಗಳ ಅಧ್ಯಕ್ಷರುಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಎಂಆರ್‌ಜಿ ಟ್ರೋಪಿ – ೨೦೨೪ ಕ್ರೀಡಾಕೂಟದ ಪ್ರಾಯೋಜಕ, ಮಹಾದಾನಿ ಡಾ| ಕೆ. ಪ್ರಕಾಶ್ ಶೆಟ್ಟಿ ಬಹುಮಾನ ವಿತರಿಸಲಿದ್ದಾರೆ. ಬಂಟ್ಸ್ ವೆಲೇರ್ ಟ್ರಸ್ಟ್‌ನ ಅಧ್ಯಕ್ಷ ಎರ್ಮಾಳು ಶಶಿಧರ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ. ಬಂಟ ಕ್ರೀಡಾರತ್ನ ಪ್ರಶಸ್ತಿ ಪ್ರದಾನ, ಕ್ರೀಡಾಳುಗಳಿಗೆ ಪ್ರೋತ್ಸಾಹ ಧನ ವಿತರಣೆ ಸಹಿತ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿ, ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮತ್ತು ಕ್ರೀಡಾಂಗಣದ ಸ್ಥಳದಾನಿ ಮುಂಬಯಿ ಉದ್ಯಮಿ ಕರುಣಾಕರ ಪೂಜಾರಿ ಅವರಿಗೆ ಗೌರವಾಭಿನಂದನೆಗಳನ್ನು ಸಲ್ಲಿಸಲಾಗುವುದು.
ಕ್ರೀಡಾಕೂಟದಲ್ಲಿ ಆಕರ್ಷಕ ಪಥ ಸಂಚಲನ, ವಾಲಿಬಾಲ್, ತ್ರೋಬಾಲ್, ಕಬ್ಬಡಿ ಪಂದ್ಯಾಟ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ವಿಜೇತರಿಗೆ ಆಕಷಕ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುವುದು. ಪಡುಬಿದ್ರಿ ಬಂಟರ ಸಂಘದ ಸದಸ್ಯರಿಂದ ನೃತ್ಯ ವೈವಿಧ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಪಡುಬಿದ್ರಿ ಬಂಟ್ಸ್ ವೆಲ್ಪೇರ್ ಟ್ರಸ್ಟ್ ಅಧ್ಯಕ್ಷ ಎರ್ಮಾಳು ಶಶಿಧರ ಶೆಟ್ಟಿ, ಸಿರಿಮುಡಿ ದತ್ತಿನಿಽ ಸ್ಥಾಪಕಾಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಽಕಾರಿ ರವಿ ಶೆಟ್ಟಿ, ಕ್ರೀಡಾಕೂಟದ ಸಂಚಾಲಕ ವಿನಯ್ ಶೆಟ್ಟಿ, ಸಹ ಸಂಚಾಲಕಿ ಶರ್ಮಿಳಾ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಯುವ ಬಂಟರ ವಿಭಾಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ, ಕ್ರೀಡಾ ಕೂಟದ ಉಸ್ತುವಾರಿ ರಿತೇಶ್ ಕುಮಾರ್ ಶೆಟ್ಟಿ, ಪ್ರಮುಖರಾದ ಜಯ ಶೆಟ್ಟಿ, ಸತೀಶ್ ಶೆಟ್ಟಿ ಗುಡ್ಡೆಚ್ಚಿ ಉಪಸ್ಥಿತರಿದ್ದರು.