Advertisement

Dec. 8-12: ಧರ್ಮಸ್ಥಳ ಲಕ್ಷದೀಪೋತ್ಸವ: ಡಿ. 11ಕ್ಕೆ ಸರ್ವಧರ್ಮ ಸಮ್ಮೇಳನ

10:49 PM Nov 26, 2023 | Team Udayavani |

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮವು ಡಿ. 8ರಿಂದ 12ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ.

Advertisement

ಡಿ. 11ರಂದು ಸಂಜೆ 5ಕ್ಕೆ ಸರ್ವಧರ್ಮ ಸಮ್ಮೇಳನದ 91 ನೇ ಅಧಿವೇಶನವನ್ನು ವಿದ್ವಾಂಸ ಬೆಂಗಳೂರಿನ ಡಾ| ಗುರುರಾಜ ಕರ್ಜಗಿ ಉದ್ಘಾಟಿಸಲಿದ್ದು, ತುಮ ಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುಪ್ರೀಂಕೋರ್ಟ್‌ ನ್ಯಾಯವಾದಿ ಡಾ| ಎಂ.ಆರ್‌. ವೆಂಕಟೇಶ್‌, ಬೆಂಗಳೂರಿನ ವಿಭು
ಅಕಾಡೆಮಿ ಮುಖ್ಯಸ್ಥ ವಿಜಯ ಪುರದ ಮಹಮ್ಮದ್‌ ಗೌಸ್‌ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಡಿ. 12ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ| ಎಸ್‌. ಸೋಮನಾಥ್‌ ಉದ್ಘಾಟಿಸಲಿದ್ದು, ಬೆಂಗಳೂರಿನ ಗಮಕಿ ಡಾ| ಎ.ವಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಹೊನ್ನಾವರದ ನಿವೃತ್ತ ಉಪನ್ಯಾಸಕ ಡಾ| ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್‌ ಬೆಳವಡಿ ಮತ್ತು ಬಂಟ್ವಾಳದ ಡಾ| ಅಜಕ್ಕಳ ಗಿರೀಶ್‌ ಭಟ್‌ ಉಪನ್ಯಾಸ ನೀಡಲಿದ್ದಾರೆ.

ಡಿ. 8ರಂದು ಬೆಳಗ್ಗೆ 10.30ಕ್ಕೆ ಹೈಸ್ಕೂಲ್‌ ವಠಾರದಲ್ಲಿ ರಾಜ್ಯಮಟ್ಟದ ವಸು ¤ಪ್ರದರ್ಶನವನ್ನು ಪುತ್ತೂರು ಸಹಾಯಕ ಕಮೀಷನರ್‌ ಗಿರೀಶ್‌ನಂದನ್‌ ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿ. 10ರಂದು ರಾತ್ರಿ 7ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್‌ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.

ಡಿ. 12ರಂದು ರಾತ್ರಿ 12ರ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ. ಈ ವೇಳೆ ನಾಡಿನ ವಿವಿಧ ಭಾಗಗಳಿಂದ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಲಿದ್ದು ವೈವಿಧ್ಯಮಯ ಸೇವೆ ಅರ್ಪಿಸಲಿದ್ದಾರೆ. ಭಕ್ತರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲಿದೆ.

Advertisement

ಉತ್ಸವಗಳ ವಿವರ
ಡಿ. 8: ಹೊಸಕಟ್ಟೆ ಉತ್ಸವ, ಡಿ. 9: ಕೆರೆಕಟ್ಟೆ ಉತ್ಸವ, ಡಿ. 10: ಲಲಿತೋದ್ಯಾನ ಉತ್ಸವ, ಡಿ. 11: ಕಂಚಿಮಾರುಕಟ್ಟೆ ಉತ್ಸವ, ಡಿ. 12: ಗೌರಿಮಾರುಕಟ್ಟೆ ಉತ್ಸವ, ಲಕ್ಷದೀಪೋತ್ಸವ, ಡಿ. 13ರಂದು ಸಂಜೆ 7ರಿಂದ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ಸಮವಸರಣ ಪೂಜೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next