Advertisement

ಮಂಗಳೂರು: ಡಿ. 26-28: ಕೆಎಸ್ಸಾರ್ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

12:34 AM Dec 24, 2022 | Team Udayavani |

ಮಂಗಳೂರು: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಜಾಂಬೂರಿಗೆ ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿ. 26ರಿಂದ 28ರ ವರೆಗೆ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

Advertisement

ಕಾರ್ಯಕ್ರಮ ಮುಗಿಸಿ ಮರಳುವಾಗ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ.

ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆ ಯಲ್ಲಿರುವ ಬಸ್‌ಗಳ ಕೊರತೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next