Advertisement
ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಶುಸಂಗೋಪನೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಜಿಲ್ಲಾ ಗೋಶಾಲೆಗಳ ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಗೊಂಡರು.
Related Articles
Advertisement
ರಾಜ್ಯದಲ್ಲಿ ಚರ್ಮಗಂಟು ರೋಗ ಉಲ್ಬಣದಿಂದ ಜಾನುವಾರುಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವ ಪ್ರಭು ಚವ್ಹಾಣ್ ಪ್ರಶ್ನಿಸುತ್ತಿದ್ದಂತೆ ಉತ್ತರಿಸಿದ ನಿರ್ದೇಶಕ ಡಾ.ಮಂಜುನಾಥ್ ಪಾಳೇಗಾರ್, ಗಡಿ ಭಾಗದಲ್ಲಿ ವೈರಾಣು ಹರಡುವಿಕೆಯಿಂದ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ರಾಜ್ಯದಲ್ಲಿ ವ್ಯಾಪಕವಾಗಿ ಚರ್ಮಗಂಟು ರೋಗಕ್ಕೆ 51 ಲಕ್ಷ ಲಸಿಕೆ ನೀಡಲಾಗಿದೆ. ಸಿಬ್ಬಂದಿ ಇಲ್ಲದಿರುವುದರಿಂದ ಲಸಿಕೆ ನೀಡುವ ಪ್ರಕ್ರಿಯೆಗೆ ತಡವಾಗುತ್ತಿದೆ ಎಂದು ಹೇಳಿದರು.
ಸರ್ಕಾರದ ಕಾರ್ಯದರ್ಶಿ ಡಾ. ಸಲ್ಮಾ ಕೆ. ಫಾಹೀಮ್ ಮಾತನಾಡಿ, ಚರ್ಮಗಂಟು ರೋಗ ಮತ್ತು ಕಾಲುಬಾಯಿ ರೋಗ ಲಸಿಕಾಕರಣಕ್ಕೆ ಪಶುವೈದ್ಯ ವಿದ್ಯಾರ್ಥಿಗಳು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳನ್ನು ಒದಗಿಸುವಂತೆ ಪಶು ವಿವಿ ಕುಲಪತಿ ಡಾ.ವೀರಣ್ಣ ಅವರಿಗೆ ಸೂಚಿಸಿದರು.
ಈಗಾಗಲೇ ಪಶುವೈದ್ಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಲಸಿಕಾಕರಣ ಮತ್ತು ರೋಗ ನಿಯಂತ್ರಣ ಪ್ರಕ್ರಿಯೆಗಳಲ್ಲಿ ತೊಡಗಿಸಲಾಗುತ್ತಿದೆ ಎಂದು ಡಾ.ವೀರಣ್ಣ ವಿವರಿಸಿದರು.
400 ಪಶು ವೈದ್ಯಾಧಿಕಾರಿಗಳು ಮತ್ತು 250 ಕಿರಿಯ ಪಶು ವೈದ್ಯಕೀಯ ಪರೀಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬದ ಕುರಿತು ತರಾಟೆ ತೆಗೆದುಕೊಂಡ ಸಚಿವ ಪ್ರಭು ಚವ್ಹಾಣ್ ಅವರ ಪ್ರಶ್ನೆಗೆ ಉತ್ತರಿಸಿದ ಇಲಾಖೆ ಆಯುಕ್ತೆ ಎಸ್. ಅಶ್ವಥಿ, ಪ್ರಕರಣ ಉಚ್ಚ ನ್ಯಾಯಾಲಯದಲ್ಲಿದ್ದು, ಅಂತಿಮ ಆದೇಶ ಹಂತದಲ್ಲಿದೆ. ಕಿರಿಯ ಪಶು ವೈದ್ಯಕೀಯ ಪರೀಕ್ಷಕರ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ತಿಂಗಳ 28ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿದೆ ಎಂದರು.
ಹಿರಿಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು. ಜಾನುವಾರುಗಳ ರಕ್ಷಣೆಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸೋಣ. ನನಗೆ ನನ್ನ ಹೆಸರು, ಶ್ರೇಯಸ್ಸು ಬೇಡ ಅದರ ಬದಲಾಗಿ ಪಶುಸಂಗೋಪನೆ ಇಲಾಖೆ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಜನ ಮಾತನಾಡುವಂತಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಡಾ.ಸಲ್ಮಾ ಕೆ. ಪಾಹೀಮ್, ಆಯುಕ್ತೆ ಎಸ್. ಅಶ್ವಥಿ, ನಿರ್ದೇಶಕ ಡಾ.ಮಂಜುನಾಥ್ ಪಾಳೇಗಾರ್, ಕರ್ನಾಟಕ ಪಶುವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವೀರಣ್ಣ ಸೇರಿದಂತೆ ವಿವಿದ ವಿಭಾಗಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.