Advertisement
ರವಿವಾರ ನಗರದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಪ್ರತಿ ಗ್ರಾಮ ಪಂಚಾಯತ್‌ಗೆ ಒಂದರಂತೆ, ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್‌ಗಳಿಗೆ ಒಂದರಂತೆ ಮತ್ತು ಇತರ ನಗರದ ಸ್ಥಳೀಯ ಸಂಸ್ಥೆಗಳಲ್ಲಿ ಅವುಗಳ ವ್ಯಾಪ್ತಿಗೆ ಹೊಂದಿಕೊಂಡಂತೆ ವಿಪತ್ತು ನಿರ್ವಹಣೆ ಯೋಜನೆಯನ್ನು ಸಿದ್ಧಪಡಿಸಲಾಗಿದೆ.
Related Articles
ಈಗಾಗಲೇ ಇನ್ಸಿಡೆಂಟ್ ಕಮಾಂ ಡರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಸರ್ವೇ ನಡೆಸಿ ಯೋಜನೆಯನ್ನು ಅಂತಿಮಪಡಿಸಿದ್ದಾರೆ. ಇದರ ಆಧಾರದಲ್ಲಿ ಆ್ಯಪ್ ಒಂದನ್ನು ಅಭಿವೃದ್ಧಿ ಪಡಿಸಲಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಆ್ಯಪ್ ಮೂಲಕ ಕೆಲಸ ನಡೆಯುತ್ತದೆ. ರಕ್ಷಣ ಕಾರ್ಯಾಚರಣೆಗಳಿಗೆ ಸಂಬಂಧಿಸಿ ಬೇಕಾದ ವಸ್ತು, ಸಲಕರಣೆಗಳನ್ನು ಪೂರೈಸಲಾಗುತ್ತದೆ. ಈಜುಗಾರರು, ಮುಳುಗು ತಜ್ಞರು, ಆಶಾ ಕಾರ್ಯಕರ್ತೆಯರೂ ಈ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಾರೆ ಎಂದರು.
Advertisement
ಕರೆ, ವಾಟ್ಸಾಪ್ ಸಂದೇಶ ಆ್ಯಪ್‌ಗೆ ವರ್ಗಾವಣೆ
ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ, ಅಧಿಕಾರಿಗಳಿಗೆ ಬರುವ ಕರೆ, ವಾಟ್ಸಾಪ್ ಸಂದೇಶಗಳನ್ನು ಆ್ಯಪ್ ಮೂಲಕ ಇನ್ಸಿಡೆಂಟ್ ಕಮಾಂಡರ್‌ಗೆ ವರ್ಗಾಯಿಸಲಾಗುತ್ತದೆ. ಸ್ಥಳೀಯ ಮಟ್ಟದಲ್ಲಿ ಪರಿಶೀಲಿಸಿ, ಸೂಕ್ತ ವ್ಯವಸ್ಥೆ ಮಾಡಿ ದೂರಿನ ವಿಲೇವಾರಿ ಮಾಡಬೇಕು. ಈ ಕೆಲಸ ಈಗಾಗಲೇ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಜನರು ದೂರುಗಳು ವಾಟ್ಸಾಪ್‌ನಿಂದ ನೇರವಾಗಿ ಆ್ಯಪ್‌ಗೆ ಬರುವಂತೆ ಅಭಿವೃದ್ಧಿಪಡಿಸಲಾಗುವುದು ಎಂದರು. ಗುಡ್ಡೆ ಅಗೆದು ಮನೆ ನಿರ್ಮಾಣ: ನಿಯಮಾವಳಿ
ಗುಡ್ಡಗಳನ್ನು ಅಗೆದು ಮನೆ ಕಟ್ಟುವುದಕ್ಕೆ ಸಂಬಂಧಿಸಿ ಪ್ರಾಕೃತಿಕ ವಿಕೋಪ ಯೋಜನೆಯಡಿ ನಿಯಮಾವಳಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರಕರಣಗಳಲ್ಲಿ ಗುಡ್ಡಗಳನ್ನು 90 ಡಿಗ್ರಿ ಕೋನದಲ್ಲಿ ಕತ್ತರಿಸಿ ಕೆಳಭಾಗದಲ್ಲಿ ಮನೆಗಳನ್ನು ನಿರ್ಮಿಸಿರುವುದು, ಲೇ ಔಟ್ ಮಾಡಿರುವುದು ಕಂಡು ಬಂದಿದೆ. ಅಂತಹ ಕಡೆಗಳಲ್ಲಿ ತಡೆಗೋಡೆಗಳ ನಿರ್ಮಾಣ ಮಾಡುವುದರಿಂದಲೂ ಪ್ರಯೋಜನವಾಗುವುದಿಲ್ಲ. ಇದರಿಂದಾಗಿ ಗುಡ್ಡ ಕುಸಿದು ಮನೆಗಳ ಮೇಲೆ ಬೀಳುವ ಪ್ರಕರಣಗಳು ಹೆಚ್ಚಾಗಿವೆ. ಸಣ್ಣ ಜಾಗದಲ್ಲಿ ಮನೆ ಕಟ್ಟಿಕೊಂಡಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ ಎಂದರು.