Advertisement

ಶಾಲೆಗಳಲ್ಲಿ ಭದ್ರತಾ ಸೂತ್ರಗಳ ಅಳವಡಿಕೆಗೆ ಸುಪ್ರೀಂ ಸೂಚನೆ

09:40 AM Apr 18, 2018 | Karthik A |

ಹೊಸದಿಲ್ಲಿ: ಸರಕಾರಿ ಅಥವಾ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಭದ್ರತೆಗಾಗಿ ಶಾಲೆಗಳು ಅಳವಡಿಸಿಕೊಳ್ಳಬಹುದಾದ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ, ಮೂರು ತಿಂಗಳೊಳಗೆ ತನಗೆ ಸಲ್ಲಿಸುವಂತೆ, ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

Advertisement

ಕಳೆದ ವರ್ಷ, ಗುರುಗ್ರಾಮದ ಶಾಲೆಯಲ್ಲಿ ಬಾಲಕನೊಬ್ಬನನ್ನು ಅದೇ ಶಾಲೆಯ ವಿದ್ಯಾರ್ಥಿಯೊಬ್ಬ ಕೊಂದಿದ್ದ ಘಟನೆ ದೇಶಾದ್ಯಂತ ತಲ್ಲಣ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ, ಬಾಲಕನ ತಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಭದ್ರತೆಗಾಗಿ ಕೈಗೊಳ್ಳಬೇಕಾದ ನಿಯಮಾವಳಿಗಳನ್ನು ರೂಪಿಸಬೇಕೆಂದು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಇದರ ಜವಾಬ್ದಾರಿಯನ್ನು ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ವಹಿಸಿದೆ. ಈ ಹಿಂದೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಗಳಿಗೂ ನಿಯಮಾವಳಿ ರೂಪಿಸುವಂತೆ ನ್ಯಾಯಪೀಠ ಸೂಚಿಸಿತ್ತು. ಈವರೆಗೆ ಕರ್ನಾಟಕ, ಹರಿಯಾಣ ಹಾಗೂ ಹಿಮಾಚಲ ಪ್ರದೇಶ ಸರಕಾರಗಳು ಮಾತ್ರ ಸ್ಪಂದಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next