Advertisement

ಅನಿರ್ದಿಷ್ಟ: ಧರಣಿಗೆ ನಿರ್ಧಾರ

03:57 PM Dec 16, 2020 | Suhan S |

ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬುಧವಾರದಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ.

Advertisement

ಹೋರಾಟದ ಕುರಿತು ಮಂಗಳವಾರ ಗನ್‌ ಹೌಸ್‌ ಬಳಿಕ ಕುವೆಂಪು ಉದ್ಯಾನವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾ ಗಿದೆ. ದೆಹಲಿಯಲ್ಲಿ 19 ದಿನಗಳಿಂದ ಕೊರೆ ಯುವ ಚಳಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ 14 ಮಂದಿ ರೈತರುಪ್ರಾಣ ತೆತ್ತಿದ್ದರೂ ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸದೆ ವಿಳಂಬ ಮಾಡುವ ಮೂಲಕಚಳವಳಿಯ ದಿಕ್ಕು ತಪ್ಪಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಈ ಚಳವಳಿ ಬೆಂಬಲಿಸಲು ಕರ್ನಾಟಕದ ರೈತರ ಪರವಾಗಿ ರೈತ ದಲಿತಕಾರ್ಮಿಕ ಐಕ್ಯ ಹೋರಾಟದಿಂದ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಬುಧವಾರ ದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ರಾಜ್ಯ ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್‌, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತಕ್ಕಾಗಿ ಕಾಯ್ದೆ ಜಾರಿಗೆ ತರಲಾಗಿದೆ ಎನ್ನುತ್ತಾರೆ. ಆದರೆ ರೈತರ ಹೋರಾಟತೀವ್ರವಾಗುತ್ತಿದ್ದಂತೆ ತಿದ್ದುಪಡಿ ಮಾಡಲು ಮುಂದಾಗುತ್ತಾರೆ. ಇದರಿಂದಲೇ ಕಾಯ್ದೆಯಲ್ಲಿ ಲೋಪ ದೋಷವಿದೆ ಎಂಬುದುಅರ್ಥವಾಗುತ್ತದೆ. ಕಲ್ಲಿದ್ದಲು, ವಿಮಾನಯಾನ, ರೈಲ್ವೆ, ಟೆಲಿಕಾಂಗಳನ್ನು ಖಾಸಗಿ ವ್ಯವಸ್ಥೆಗೆ ಮಾರಲಾಗಿದೆ. ಈಗ ದೇಶದ ರೈತರನ್ನು ಖಾಸಗಿ ಕಂಪನಿಗಳಿಗೆ ಮಾರಾಮಾಡಲು ಮುಂದಾಗಿದ್ದಾರೆ. ಅದಕ್ಕಾಗಿಯೇ ದೇಶದ ರೈತರು ಜಾಗೃತರಾಗಿ ಬೀದಿಗಿಳಿದಿದ್ದಾರೆ. ವಿರೋಧ ಪಕ್ಷಗಳು ರೈತ ಹೋರಾಟವನ್ನು ಬೆಂಬಲಿಸಿದರೆ ಆಡಳಿತ ಪಕ್ಷಕ್ಕೆ ಆಗುವ ನಷ್ಟವೇನು ಎಂದು ಪ್ರಶ್ನಿಸಿದರು.

ರಾಜ್ಯದ ರೈತ, ದಲಿತಕಾರ್ಮಿಕ ಸಂಘಟನೆ ಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಬೆಂಬಲ ಸೂಚಿಸಬೇಕು. ಈಹೋರಾಟದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ, ಸರ್ಕಾರಗಳ ವೈಫ‌ಲ್ಯದಿಂದ ನಾವು ಚಳವಳಿ ದಾರಿ ಹಿಡಿಯಬೇಕಿದೆ ಎಂದರು.

ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್‌, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರ್‌ ಶಂಕರ, ರಾಜಣ್ಣ, ಅಂಕಪ್ಪ, ಪರಶಿವಮೂರ್ತಿ ಮಹಿಳಾ ಸಂಚಾಲಕಿ ರಾಣಿ, ಬರಡನಪುರ ನಾಗ ರಾಜ್‌,ಆಡ್ಯರವಿ, ಪ್ರಸಾದ್‌ ನಾಯಕ್‌ ಮಂಜುನಾಥ್‌, ಗುರುಸ್ವಾಮಿ, ರಾಮೇಗೌಡ, ಕೃಷ್ಣಗೌಡ, ರಾಜು, ರಂಗರಾಜ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next