Advertisement

ಮಡಿವಾಳ ಮಾಚಿದೇವ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

07:13 AM Jan 25, 2019 | |

ಕಲಬುರಗಿ: ನಗರ ಮತ್ತು ಜಿಲ್ಲೆಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆ. 1ರಂದು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ನಿರ್ಧರಿಸಿತು.

Advertisement

ಅಂದು ಬೆಳಗ್ಗೆ 11:30ಕ್ಕೆ ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಜಿಲ್ಲಾಮಟ್ಟದ ಜಯಂತಿಗೆ ಚಾಲನೆ ನೀಡಲಾಗುವುದು. ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಸಮಾರಂಭದಲ್ಲಿ ಶರಣರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗುವುದು.

ಇದಕ್ಕೂ ಮುನ್ನ ಹುಮನಾಬಾದ ರಿಂಗ್‌ ರಸ್ತೆಯ ಮಡಿವಾಳ ಮಾಚಿದೇವರ ವೃತ್ತದಿಂದ ವಿವಿಧ ಕಲಾ ತಂಡಗಳೊಂದಿಗೆ ಶರಣ ಮಡಿವಾಳ ಮಾಚಿದೇವರ ಭಾವಚಿತ್ರವೊಳಗೊಂಡ ಭವ್ಯ ಮೆರವಣಿಗೆ ಬೆಳಗ್ಗೆ 9:30ಕ್ಕೆ ಆರಂಭಗೊಂಡು ಸೂಪರ್‌ ಮಾರ್ಕೇಟ್, ಜಗತ್‌ ವೃತ್ತ ಮಾರ್ಗವಾಗಿ ಡಾ| ಎಸ್‌.ಎಂ. ಪಂಡಿತ ರಂಗಮಂದಿರಕ್ಕೆ ಆಗಮಿಸಲಿದೆ.

ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರಿನ ವ್ಯವಸ್ಥೆ, ಕಾರ್ಯಕ್ರಮದ ಸ್ಥಳ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಕಾಶ ಚಿಂಚೋಳಿಕರ ಸೂಚಿಸಿದರು. ಸಭೆಯಲ್ಲಿ ಭಾಗವಹಿಸಿದ ಸಮಾಜದ ಮುಖಂಡರು ಜಯಂತಿಯ ಯಶಸ್ವಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್‌ ಮರಬನಳ್ಳಿ ಜಯಂತಿ ಅಂಗವಾಗಿ ಕೈಗೊಂಡ ಪೂರ್ವ ಸಿದ್ಧತೆ ಬಗ್ಗೆ ವಿವರಿಸಿದರು. ಜಿಲ್ಲಾ ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷರು ಸೇರಿದಂತೆ ಸಮಾಜದ ಹಿರಿಯ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next