Advertisement

ಎಲ್ಲವನ್ನೂ ಹೈಕಮಾಂಡ್‌ ನಿರ್ಧರಿಸುತ್ತೆ

10:23 AM May 17, 2019 | Suhan S |

ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತೂಮ್ಮೆ ಸಿಎಂ ಆಗಬೇಕು ಎಂದು ಕೆಲ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡಿದವರನ್ನು ಜನರು ಸ್ಮರಿಸುತ್ತಾರೆ. ಅದೇ ರೀತಿ ಅವರು ಮತ್ತೂಮ್ಮೆ ಸಿಎಂ ಆಗಲಿ ಎಂದು ಬಯಸುತ್ತಿರಬೇಕು. ಅದರೆ ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲವನ್ನೂ ನಿರ್ಧರಿಸುತ್ತದೆ ಎಂದು ಸಂಸದ ಕೆ.ಎಚ್. ಮುನಿಯಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೇ ಮುಂದಿನ ಸಿಎಂ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಈಗ ಉಪಚುನಾವಣೆ ಪ್ರಚಾರಕ್ಕೆ ಗಮನ ಹರಿಸಬೇಕಿದೆ ಎಂದು ಹೇಳಿದರು. ಕೇಂದ್ರದಲ್ಲಿ ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರದು. ಬಿಜೆಪಿಯವರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ರಾಹುಲ್ ಗಾಂಧಿ ಪ್ರಧಾನಿಯಾಗುವುದು ಖಚಿತ. ರೈತರ ಸಾಲ ಮನ್ನಾ ಮಾಡಲು ಪ್ರಧಾನಿ ಮೋದಿ ಆದ್ಯತೆ ನೀಡಲಿಲ್ಲ. ಆದರೆ ಅವರು ಉದ್ಯಮಿಗಳ 2.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೈತರ 8500 ಕೋಟಿ ರೂ. ಸಾಲ ಮನ್ನಾ ಮಾಡಿದರು. ಈಗ ಸಿಎಂ ಎಚ್.ಡಿ. ಕುಮಾರಸ್ವಾಮಿ 45,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಲು ಮುಂದಾಗಿದ್ದಾರೆ ಎಂದರು.

Advertisement

ಕುಂದಗೋಳದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಖಚಿತ. ಸಿ.ಎಸ್‌. ಶಿವಳ್ಳಿ ಅವರು ಮಾಡಿದ ಕೆಲಸಗಳು ಹಾಗೂ ಮೈತ್ರಿ ಸರಕಾರದ ಜನಪರ ಯೋಜನೆಗಳಿಂದಾಗಿ ಕುಸುಮಾವತಿ ಶಿವಳ್ಳಿ ಬಹುಮತದಿಂದ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಕೇರಳದಲ್ಲಿ ಸ್ಪರ್ಧಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಎರಡು ದಶಕಗಳಿಂದ ಗುಜರಾತ್‌ನಲ್ಲಿ ಸ್ಪರ್ಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಗೆ ಹೋಗಿ ನಿಲ್ಲುವ ಅವಶ್ಯಕತೆ ಏನಿತ್ತು? ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಿಂತು ಆರಿಸಿ ಬರಬೇಕೆಂಬುದು ನಮ್ಮ ಮಹದಾಸೆಯಾಗಿತ್ತು. ಆದರೆ ಅವರು ಕೇರಳದಲ್ಲಿ ಸ್ಪರ್ಧಿಸಿದರು. ಅವರು ಬಹುಮತದಿಂದ ಆಯ್ಕೆಯಾಗುವುದರಲ್ಲಿ ಸಂಶಯವಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರಾದ ಅನಿಲಕುಮಾರ ಪಾಟೀಲ, ಎಫ್‌.ಎಚ್. ಜಕ್ಕಪ್ಪನವರ, ಮಹೇಂದ್ರ ಸಿಂಘಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next