Advertisement
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಯಾರೂ ಯಾವ ಬೆದರಿಕೆಯನ್ನೂ ಹಾಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಚಿವ ನಾಗೇಂದ್ರ ರಾಜೀನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಯಾವುದೇ ನಿರ್ಧಾರ ಮಾಡಬೇಕೆಂದರೂ ಮೊದಲು ವರದಿ ಬರಬೇಕು. ಹೀಗಾಗಿ ವರದಿ ಬಂದಾದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಎಸ್‌ಐಟಿ ಮಧ್ಯಾಂತರ ವರದಿ ಸಲ್ಲಿಸಿದ ಬಳಿಕ ರಾಜೀನಾಮೆ ಬಗ್ಗೆ ನಿರ್ಧರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಚಿಕ್ಕೋಡಿಯಲ್ಲಿ ಹೇಳಿದ್ದಾರೆ. ಜೂ.6ರೊಳಗೆ ಸಚಿವ ನಾಗೇಂದ್ರ ರಾಜೀನಾಮೆ ಪಡೆಯದಿದ್ದರೆ ಸರಕಾರದ ವಿರುದ್ಧವೇ ಹೋರಾಟ ಮಾಡಲಾಗುವುದು. ಪ್ರಕರಣ ಅಂಗೈ ಹುಣ್ಣಿನಷ್ಟು ಸ್ಪಷ್ಟವಾಗಿದ್ದರೂ ಮುಖ್ಯಮಂತ್ರಿಗಳು ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುತ್ತಿಲ್ಲ. ಇದರಲ್ಲಿ ಸರ್ಕಾರದ ಪಾತ್ರವಿದೆಯೇ ಎಂಬ ಅನುಮಾನ ಕಾಡುತ್ತಿದೆ. ಈ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ದ್ವಂದ್ವ ನಿಲುವು ತಾಳಿದ್ದಾರೆ.
-ಸಿ.ಟಿ.ರವಿ, ಮಾಜಿ ಸಚಿವ
Related Articles
– ಆರ್. ಅಶೋಕ್, ವಿಪಕ್ಷ ನಾಯಕ
Advertisement