Advertisement

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

11:29 PM Jun 03, 2024 | Team Udayavani |

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ. ಪ್ರಕರಣದ ಪ್ರಾಥಮಿಕ ವರದಿ ಬಂದ ಬಳಿಕ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಯಾರೂ ಯಾವ ಬೆದರಿಕೆಯನ್ನೂ ಹಾಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವರದಿ ಬಂದ ಬಳಿಕ ನಿರ್ಧಾರ: ಜಾರಕಿಹೊಳಿ
ಸಚಿವ ನಾಗೇಂದ್ರ ರಾಜೀನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಯಾವುದೇ ನಿರ್ಧಾರ ಮಾಡಬೇಕೆಂದರೂ ಮೊದಲು ವರದಿ ಬರಬೇಕು. ಹೀಗಾಗಿ ವರದಿ ಬಂದಾದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಎಸ್‌ಐಟಿ ಮಧ್ಯಾಂತರ ವರದಿ ಸಲ್ಲಿಸಿದ ಬಳಿಕ ರಾಜೀನಾಮೆ ಬಗ್ಗೆ ನಿರ್ಧರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಬೆಳಗಾವಿಯ ಚಿಕ್ಕೋಡಿಯಲ್ಲಿ ಹೇಳಿದ್ದಾರೆ.

ಜೂ.6ರೊಳಗೆ ಸಚಿವ ನಾಗೇಂದ್ರ ರಾಜೀನಾಮೆ ಪಡೆಯದಿದ್ದರೆ ಸರಕಾರದ ವಿರುದ್ಧವೇ ಹೋರಾಟ ಮಾಡಲಾಗುವುದು. ಪ್ರಕರಣ ಅಂಗೈ ಹುಣ್ಣಿನಷ್ಟು ಸ್ಪಷ್ಟವಾಗಿದ್ದರೂ ಮುಖ್ಯಮಂತ್ರಿಗಳು ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುತ್ತಿಲ್ಲ. ಇದರಲ್ಲಿ ಸರ್ಕಾರದ ಪಾತ್ರವಿದೆಯೇ ಎಂಬ ಅನುಮಾನ ಕಾಡುತ್ತಿದೆ. ಈ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ದ್ವಂದ್ವ ನಿಲುವು ತಾಳಿದ್ದಾರೆ.
-ಸಿ.ಟಿ.ರವಿ, ಮಾಜಿ ಸಚಿವ

ರಾಜ್ಯ ಸರಕಾರದ ಮೊದಲ ವಿಕೆಟ್‌ ಬೀಳುವ ವರೆಗೂ ಹೋರಾಟ ಮಾಡುತ್ತೇವೆ. ಸಚಿವ ನಾಗೇಂದ್ರ ರಾಜೀನಾಮೆ ನೀಡಲೇಬೇಕು. ರಾಜ್ಯ ಸರಕಾರದಲ್ಲಿ ಸಚಿವರು ಭ್ರಷ್ಟಾಚಾರ ಎಸಗಿ ರಾಜಾರೋಷವಾಗಿ ತಿರುಗಾಡುತ್ತಿದ್ದು, ಮುಖ್ಯಮಂತ್ರಿಗಳು ಅಂಥ ಸಚಿವರನ್ನು ಸಮರ್ಥಿಸುತ್ತಿದ್ದಾರೆ. ಇದರ ವಿರುದ್ಧ ಪ್ರಬಲ ಹೋರಾಟ ಸಂಘಟಿಸುತ್ತೇವೆ.
– ಆರ್‌. ಅಶೋಕ್‌, ವಿಪಕ್ಷ ನಾಯಕ

Advertisement

 

Advertisement

Udayavani is now on Telegram. Click here to join our channel and stay updated with the latest news.

Next