Advertisement

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ತೀರ್ಮಾನ

12:55 PM Jan 06, 2021 | Team Udayavani |

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ಗಣರಾಜ್ಯೋತ್ಸವವನ್ನು ಜ. 26ರಂದು ಅಥ ಪೂರ್ಣವಾಗಿ ಆಚರಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಾರಿಯೂಗಣರಾಜ್ಯೋತ್ಸವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ಆರಂಭದಲ್ಲಿಯೇ ಗಣರಾಜ್ಯೋತ್ಸವ ಆಚರಣೆ ಕುರಿತು ಮುಖಂಡರು ಸಲಹೆ ಅಭಿಪ್ರಾಯವ್ಯಕ್ತಪಡಿಸಿದರು. ವಿವಿಧ ಮುಖಂಡರು ಮಾತನಾಡಿ ಜಿಲ್ಲೆಯ ಎಲ್ಲಾ ಕೇಂದ್ರ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಬೇಕು. ಈ ಹಿಂದಿನಿಂದಲೂ ರಾಷ್ಟ್ರೀಯಕಾರ್ಯಕ್ರಮಗಳನ್ನು ಬ್ಯಾಂಕ್‌ಗಳಲ್ಲಿ ಆಚರಿಸಬೇಕೆಂಬ ಒತ್ತಾಯಮಾಡಲಾಗುತ್ತಿದೆ. ಆದರೆ, ಬ್ಯಾಂಕುಗಳು ನಿರ್ದೇಶನವನ್ನು ಪಾಲನೆ ಮಾಡುತ್ತಿಲ್ಲ ಎಂದು ಗಮನಕ್ಕೆ ತಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಗೌರವ ಸಲ್ಲಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಸೇವೆಸಲ್ಲಿಸಿರುವವರನ್ನು ಗುರುತಿಸಿ ಗೌರವಿಸಬೇಕು.ಕಡ್ಡಾಯವಾಗಿ ಎಲ್ಲರೂ ಭಾಗವಹಿಸುವಂತಾಗಬೇಕು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವಗಣರಾಜ್ಯೋತ್ಸವಕ್ಕೆ ಎಲ್ಲಾ ಸಹಕಾರ ನೀಡುವುದಾಗಿ ಮುಖಂಡರು ತಿಳಿಸಿದರು.  ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮಾತನಾಡಿ, ಗಣರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆಮಾಡಲಾಗುತ್ತದೆ. ಕಾರ್ಯಕ್ರಮದ ಸುಗಮನಿರ್ವಹಣೆಗೆ ಅಧಿಕಾರಿಗಳನ್ನು ಒಳಗೊಂಡಸಮಿತಿ ರಚಿಸಿದ್ದು ಹೊಣೆಗಾರಿಕೆ ನೀಡಲಾಗುತ್ತದೆ ಎಂದರು.

ಕೋವಿಡ್‌ ಶಿಷ್ಟಾಚಾರವನ್ನು ಪಾಲಿಸಬೇಕು.ಕಾರ್ಯಕ್ರಮದ ಏರ್ಪಾಡು ಅಚ್ಚುಕಟ್ಟಾಗಿ ಆಗಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ದೇಶಭಕ್ತಿ ಪ್ರಧಾನಆಧಾರಿತ ಕಾರ್ಯಕ್ರಮಗಳ ಆಯೋಜನೆಗೆ ಪೂರ್ವಭಾವಿ ಸಿದ್ಧತೆಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌, ಹೆಚ್ಚುವರಿ ಜಿಲ್ಲಾಧಿಕಾರಿಸಿ.ಎಲ್‌. ಆನಂದ್‌ ಹೆಚ್ಚುವರಿ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್‌, ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು. ನಾಗರಾಜು,ಕೆ.ಎಂ. ನಾಗರಾಜು, ನಿಜಧ್ವನಿಗೋವಿಂದರಾಜು, ಸಿ.ಎಂ. ಶಿವಣ್ಣ, ಸುರೇಶ್‌,ನಾರಾಯಣ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು

ಬ್ಯಾಂಕ್‌ನಲ್ಲಿ ಗಣರಾಜ್ಯೋತ್ಸವ ಕಡ್ಡಾಯ :

ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಣೆಗೆ ಕ್ರಮ ತೆಗೆದುಕೊಳ್ಳಬೇಕು. ಬ್ಯಾಂಕುಗಳಿಗೆ ಸುತ್ತೋಲೆ ಹೊರಡಿಸಿ ಆಚರಣೆಗೆ ಸೂಚನೆ ನೀಡಬೇಕು.ಗಣರಾಜ್ಯೋತ್ಸವಆಚರಿಸದೆ ಇರುವ ಬ್ಯಾಂಕುಗಳ ವರದಿಯನ್ನು ನೀಡಬೇಕು. ಇಂತಹ ಬ್ಯಾಂಕುಗಳ ವಿರುದ್ಧಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು ಖುದ್ದು ಗಮನಹರಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ನಿರ್ದೇಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next