Advertisement

ಸರಳ-ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

05:12 PM Oct 22, 2020 | Suhan S |

ದಾವಣಗೆರೆ: ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಹಾಗೂ ಚುನಾವಣಾ ಮಾದರಿ ನೀತಿಸಂಹಿತೆಯನ್ನು ಪಾಲಿಸಿಕೊಂಡು ನ.1 ರಂದು ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

Advertisement

ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯಕನ್ನಡ ರಾಜ್ಯೋತ್ಸವ ಭಿನ್ನವಾಗಿರಲಿದೆ.ಹೊರಾಂಗಣದಲ್ಲಿ ಏರ್ಪಡಿಸುವಂತಹ ಕಾರ್ಯಕ್ರಮಗಳಿಗೆ ಸಂಬಂಧಿ ಸಿದಂತೆ ಕೋವಿಡ್‌ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ನಿಯಮಗಳನ್ನು ರೂಪಿಸಿ ಮಾರ್ಗಸೂಚಿ ಹೊರಡಿಸಿವೆ. ಅಲ್ಲದೆ ಈ ಬಾರಿ ಆಗ್ನೇಯ ಪದವೀಧರ ಕ್ಷೇತ್ರಕ್ಕೂ ಚುನಾವಣೆ ಪ್ರಕ್ರಿಯೆ ನಡೆದಿರುವುದರಿಂದ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿಸಂಹಿತೆಯನ್ನು ಪಾಲಿಸಬೇಕಿದೆ. ಹಾಗಾಗಿ ಆದಷ್ಟು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಕನ್ನಡ ತಾಯಿಯ ಹಬ್ಬವನ್ನು ನ. 1 ರಂದು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ನ. 1 ರಂದು ಬೆಳಗ್ಗೆ 8 ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆ ಪ್ರಾರಂಭವಾಗಲಿದೆ. ಈ ಬಾರಿ 6 ಕಲಾ ತಂಡಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಮೆರವಣಿಗೆ ನಡೆಸಲಿವೆ. 10 ಗಂಟೆಗೆಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣನೆರವೇರಲಿದೆ. ಈ ಸಲ ಸ್ತಬ್ಧಚಿತ್ರ ಪ್ರದರ್ಶನಹಾಗೂ ಅಭಿವೃದ್ಧಿ ಪರ ಭಾಷಣ ಇರುವುದಿಲ್ಲ. ಕೋವಿಡ್‌ ಕಾರಣಕ್ಕಾಗಿ ಈ ಬಾರಿ ಮಕ್ಕಳ ಪಾಲ್ಗೊಳ್ಳುವಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ. ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲ ಕನ್ನಡಪರ ಸಂಘಟನೆಗಳು, ಕನ್ನಡ ಪ್ರೇಮಿಗಳು, ಸಾರ್ವಜನಿಕರು ಪಾಲ್ಗೊಳ್ಳಬೇಕು. ರಾಜ್ಯೋತ್ಸವ ಹಾಗೂ ಮುನ್ನಾ ದಿನ ಜಿಲ್ಲೆಯ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳು,ಹೋಟೆಲ್‌ಗ‌ಳು, ಕನ್ನಡ ಪ್ರೇಮಿಗಳು ತಮ್ಮ ಕಟ್ಟಡಗಳಿಗೆ ಹಳದಿ ಹಾಗೂ ಕೆಂಪು ವಿದ್ಯುತ್‌ ದೀಪಾಲಂಕಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನಗರದಲ್ಲಿನ ಎಲ್ಲ ಅಂಗಡಿ, ಸಂಸ್ಥೆಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡಮಯಗೊಳಿಸಬೇಕು. ನವೆಂಬರ್‌ ತಿಂಗಳಿನಲ್ಲಿಯೇ ಚಾಲನೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕ ಗಳಿಸಿದವರನ್ನು ಗುರುತಿಸಿ ಅಂತಹವರನ್ನು ಜಿಲ್ಲಾಡಳಿತ ಸನ್ಮಾನ ಮಾಡಬೇಕು ಎಂದು ಕನ್ನಡ ಸಂಘಟನೆಯ ಪ್ರತಿನಿಧಿ ಗಳು ಒತ್ತಾಯಿಸಿದರು. ಕನ್ನಡ ವಂಶದ ಮೊದಲ ದೊರೆ ಮಯೂರವರ್ಮನ ಪುತ್ಥಳಿಯನ್ನು ಜಿಲ್ಲಾ ಕೇಂದ್ರದಲ್ಲಿಯೇ ಸ್ಥಾಪಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಕನ್ನಡ ಸಂಘಟನೆಗಳ ಮನವಿಯನ್ನು ಪುರಸ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ,ಉಪವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ನಗರಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿ, ಗ್ರಾಮಾಂತರ ಡಿವೈಎಸ್‌ಪಿ ತಾಮ್ರಧ್ವಜ ಇತರರು ಇದ್ದರು.

Advertisement

ವಿವಿಧ ಕ್ಷೇತ್ರಗಳ ಸಾಧಕರ ಗೌರವಿಸಲು ಮನವಿ :  ವಿವಿಧ ಕಾರಣಗಳಿಂದ ಕಳೆದ ಬಾರಿಯೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಮಾಡಿಲ್ಲ. ಹೀಗಾಗಿ ಈ ಬಾರಿಯಾದರೂ ನೀತಿಸಂಹಿತೆ ಮುಗಿದ ಬಳಿಕ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಗುರುತಿಸಿ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಸನ್ಮಾನಿಸಬೇಕು. ಸನ್ಮಾನಕ್ಕೆ ಆಯ್ಕೆಯಾದವರ ಕ್ರಿಮಿನಲ್‌ ಹಾಗೂ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಿದ ಬಳಿಕವೇ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕೆಲವು ಪ್ರತಿನಿಧಿಗಳು ಮನವಿ ಮಾಡಿದರು. ಎರಡೂ ವರ್ಷಗಳನ್ನು ಪರಿಗಣಿಸಿ ಸಾಧಕರನ್ನು ಗುರುತಿಸಿ ಆಯ್ಕೆ ಮಾಡಲು ಸನ್ಮಾನ ಸಮಿತಿಯನ್ನು ರಚಿಸಲಾಗುವುದು. ಸನ್ಮಾನಕ್ಕೆ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅಂತಹವರ ಹಿನ್ನೆಲೆಯ ಬಗ್ಗೆ ವರದಿ ಪಡೆದ ಬಳಿಕವೇ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ನವೆಂಬರ್‌ ತಿಂಗಳ ಒಳಗಾಗಿ ಈ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next