Advertisement

ಅರ್ಥಪೂರ್ಣ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ನಿರ್ಧಾರ

03:46 PM Sep 09, 2022 | Team Udayavani |

ಆಳಂದ: ಸೆ. 17ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅರ್ಥಪೂರ್ಣ ಆಚರಣೆಗೆ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಅಂದು ಭಗವಾನ್‌ ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಸಮಾಜ ಬಾಂಧವರನ್ನು ಆಮಂತ್ರಿಸಿ ಆಡಳಿತ ಸೌಧನಲ್ಲಿ ಇದೇ ವೇಳೆ ಜಯಂತಿ ಆಚರಿಸಲಾಗುವುದು ಎಂದು ತಹಶೀಲ್ದಾರರು ಸಭೆಯಲ್ಲಿ ಹೇಳಿದರು.

Advertisement

ಅಂದು ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಬಳಿಕ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನೆರವೇರಿಸಲು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿರ್ಧರಿಸಲಾಯಿತು. ಇದಕ್ಕೂ ಮುನ್ನಾದಿನ ಆಡಳಿತ ಸೌಧಕ್ಕೆ ವಿದ್ಯುತ್‌ ದೀಪಾಲಂಕಾರಗೊಳಿಸಿ ಕಂಗೊಳಿಸುವಂತೆ ಹಾಗೂ ಮರುದಿನದ ಸಮಾರಂಭದಲ್ಲಿ ವಿಮೋಚನಾ ಚಳವಳಿ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ ನೆರವೇರಿಸಲು ತೀರ್ಮಾನಿಸಿದರು. ಪ್ರತಿವರ್ಷದಂತೆ ನಿಗದಿತ ಸಮಯದಲ್ಲಿ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ಕೈಗೊಂಡು ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಹಶೀಲ್ದಾರ್‌ ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ, ಸಹಾಯಕ ಕೃಷಿ ನಿರ್ದೇಶಕ ಪಿ.ಎಂ. ಮಲ್ಲಿಕಾರ್ಜುನ, ಸಿಡಿಪಿಒ ಶಿವಮೂರ್ತಿ ಕುಂಬಾರ, ಸಮಾಜ ಕಲ್ಯಾಣಾಧಿಕಾರಿ ಮೋನಮ್ಮಾ ಸುತಾರ, ಬಿಸಿಎಂ ಸಿಬ್ಬಂದಿ ಇಲಾಖೆಯ ಸುನೀತಾ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಜಿಪಂ ಸಿಬ್ಬಂದಿ ಗಣಪತಿ ಚೌದ್ರಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next