ಮಂಡ್ಯ: ಕೋವಿಡ್ ಹಿನ್ನೆಲೆಯಲ್ಲಿ ಮುಂದಿನ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆಕುರಿತ ಪೂರ್ವಭಾವಿ ಸಭೆಯಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಅಂದು ಬೆಳಗ್ಗೆ 9ಕ್ಕೆ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮ ಸಿದ್ಧತೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು,ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಿದ್ಧತೆಗೆ ಸೂಚನೆ: ಹೋಂ ಗಾರ್ಡ್, ಅಬಕಾರಿ, ಅರಣ್ಯ ಹಾಗೂ ಪೊಲೀಸ್ ಇಲಾಖೆಯಿಂದ ಪರೇಡ್‌ಗೆ ಮಾತ್ರ ಅವಕಾಶವಿದ್ದು, ಮೆರವಣಿಗೆ ಇರುವುದಿಲ್ಲ. ಧ್ವಜಾರೋಹಣ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆ, ತಹಶೀಲ್ದಾರ್ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಗೆ ವಹಿಸಲಾಯಿತು. ರಾಷ್ಟ್ರಗೀತೆ,ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಗೆ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲಾ ಕ್ರೀಡಾಂಗಣದ ಸ್ವತ್ಛತೆ, ಶುದ್ಧ ಕುಡಿಯುವನೀರು,ವೇದಿಕೆ,ವಿದ್ಯುತ್,ಧ್ವನಿವರ್ಧಕ,ಜನರೇಟರ್, ಆಸನಗಳ ವ್ಯವಸ್ಥೆಗಳ ಜೊತೆಗೆ ಪೊಲೀಸ್‌ಬಂದೋಬಸ್ತ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಕಡ್ಡಾಯವಾಗಿ ಅಧಿಕಾರಿಗಳು ಪಾಲ್ಗೊಳ್ಳಿ:
ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸುವ ಮೂಲಕ ಸಾಮಾಜಿಕಅಂತರ ಕಾಯ್ದುಕೊಳ್ಳಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಮುಖ್ಯ ಉಪಕಾರ್ಯದರ್ಶಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ,ಮಂಡ್ಯ ಉಪ ವಿಭಾಗಾಧಿಕಾರಿ ನೇಹಾಜೈನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವವನ್ನು ಯಾವುದೇ ಲೋಪವಿಲ್ಲದಂತೆಯಶಸ್ವಿಗೊಳಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿದ್ದು, ಸಮರ್ಪಕವಾಗಿಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
–ಡಾ.ಎಂ.ವಿ.ವೆಂಕಟೇಶ್, ಜಿಲ್ಲಾಧಿಕಾರಿ