Advertisement

ಜೆಡಿಎಸ್‌ಗೆ ಬೆಂಬಲ ನೀಡದಿರಲು ನಿರ್ಧಾರ

12:23 PM Mar 31, 2019 | Team Udayavani |

ಬೆಂಗಳೂರು: ಜೆಡಿಎಸ್‌ ಪಕ್ಷ ಹಿಂದುಳಿದ ಮತ್ತು ದಲಿತರ ವಿರೋಧಿ ನಿಲುವನ್ನು ಪ್ರದರ್ಶಿಸಿದೆ. ಇದನ್ನು ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತನೀಡದಿರಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮಾವಳ್ಳಿ ಶಂಕರ್‌ ಹೇಳಿದರು.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ್ತಿ ಮೀಸಲಾತಿ ಕಾಯ್ದೆ, ಚಿನ್ನಪ್ಪರೆಡ್ಡಿ ಮತ್ತು ಮಂಡಲ್‌ ಆಯೋಗದ ವರದಿಗಳನ್ನು ಅನುಷ್ಠಾನ ಮಾಡುವಲ್ಲಿ ಜೆಡಿಎಸ್‌ ನಡೆದುಕೊಂಡ ರೀತಿ ದಲಿತ ವಿರೋಧಿ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದರು.

ಜೆಡಿಎಸ್‌ ಪಕ್ಷದ ನಾಯಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಯಾವುದೇ ಉನ್ನತ ಹುದ್ದೆ ಸಿಗದಂತೆ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿ ಸಹ ಸ್ವಜನಪಕ್ಷಪಾತ ನಿಲುವು ತೆಳೆದಿದ್ದಾರೆ. ಹೆಚ್‌.ಡಿ ದೇವೇಗೌಡ, ನಿಖೀಲ್‌ ಕುಮಾರ ಸ್ವಾಮಿ ಮತ್ತು ಪ್ರಜ್ವಲ್‌ ರೇವಣ್ಣ ಅವರನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ದಲಿತರ ಶಕ್ತಿಯನ್ನು ಪ್ರದರ್ಶಿಸಲಾಗುವುದು ಎಂದರು.

ರಾಜ್ಯ ದಲಿತ ಸಂಘರ್ಷ ಸಮಿತಿಯ ಡಾ.ಮೋಹನ್‌ ರಾಜ್‌, ಈ ಬಾರಿಯ ಚುನಾವಣೆಯಲಿ É ದಲಿತ ಒಕ್ಕೂಟ ಸಂಘಟನೆಗಳು ಜೆಡಿಎಸ್‌ ಪಕ್ಷವನ್ನು ಸೋಲಿಸುವ ಮೂಲಕ ಜೆಡಿಎಸ್‌ ಮುಕ್ತ ರಾಜ್ಯವನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next