Advertisement

ಕಾಂಗ್ರೆಸ್‌ ಮುಕ್ತ ಭಾರತ ಜನತೆಯ ತೀರ್ಮಾನ

02:44 PM May 25, 2022 | Team Udayavani |

ಚನ್ನಮ್ಮನ ಕಿತ್ತೂರ: ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ರಾಜ್ಯದಲ್ಲಿಯೂ ಸಹ ಕಾಂಗ್ರೆಸ್‌ ಮುಕ್ತ ಮಾಡಲು ಜನತೆ ಉತ್ಸುಕರಾಗಿದ್ದಾರೆಂದು ಜಿಲ್ಲಾ ಉಸ್ತುವಾರಿ ಮತ್ತು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

Advertisement

ಇಲ್ಲಿಯ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರುಗಿದ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನುಡಿದಂತೆ ದೇಶ ಕಾಂಗ್ರೆಸ್‌ ಮುಕ್ತವಾಗುತ್ತಿದೆ. ಪ್ರಧಾನಿ ಮೋದಿಯವರು ದೂರದೃಷ್ಟಿಯುಳ್ಳ ನಾಯಕ. ಉತ್ತಮ ಆಡಳಿತದ ಮೂಲಕ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಶಾಸಕ ಮಹಾಂತೇಶ ದೊಡಗೌಡರ ಕಿತ್ತೂರು ಮತಕ್ಷೇತ್ರಕ್ಕೆ ಸುಮಾರು ರೂ. 1200 ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದಾರೆ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣಾಯಲ್ಲಿ ಇಬ್ಬರು ಅಭ್ಯರ್ಥಿಗಳು ಸರಳ, ಸಜ್ಜನ, ಪ್ರಾಮಾಣಿಕ ರಾಜಕಾರಣಿಗಳಾಗಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಕಳೆದ ಅವಧಿಗಿಂತಲು ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಲ್ಲಿ ಮತದಾರರು ಇವರನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪದವೀಧರ ಕ್ಷೇತ್ರದ ಅಭ್ಯರ್ಥಿ ಹನುಮಂತ ನಿರಾಣಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪೂರ ಮಾತನಾಡಿ, ನಮ್ಮ ಅಧಿಕಾರದ ಅವ ಧಿಯಲ್ಲಿ ಉತ್ತಮ ಸೇವೆ ನೀಡಿದ್ದೇವೆ. ಶಿಕ್ಷಕರ ಮತ್ತು ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದೇವೆ. ಬಿಎಸ್‌ .ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಜರುಗಿವೆ. ಹೆಚ್ಚಿನ ಅನುದಾನ ನೀಡಿ ಶಿಕ್ಷಣ ಸಂಸ್ಥೆಗಳನ್ನು ಉಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಹತ್ತರ ಬದಲಾವಣೆ ತಂದು ಮೋದಿಯವರು ಶಿಕ್ಷಣ ಕ್ರಾಂತಿ ಮಾಡುತ್ತಿದ್ದಾರೆ. 1995ರ ವರೆಗಿನ ಅನುದಾನ ರಹಿತ ಶಾಲೆಗಳಿಗೆ ಅನುದಾನ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಗೆ ಸೂಚಿಸಿದ್ದಾರೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ಕ್ರಮ ವಹಿಸಲಾಗುವುದೆಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಬಿಜೆಪಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಹಿಂದು ಧರ್ಮದ ಉಳಿವಿಗಾಗಿ ಬಿಜೆಪಿ ಪಕ್ಷ ಶ್ರಮಿಸುತ್ತಿದೆ. ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಮೋದಿಯವರ ಕೈ ಬಲಪಡಿಸಿ. ಈ ಚುನಾವಣೆಯಲ್ಲಿನ ಗೆಲವು 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.

ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಬಿಜೆಪಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಹೇಳಿದರು.

Advertisement

ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ, ರಾಜಸಭಾ ಸದಸ್ಯ ಈರಣ್ಣ ಕಡಾಡಿ, ಉಪಸಭಾಪತಿ ಆನಂದ ಮಾಮನಿ, ಭಾರತಿ ಮಗದುಮ್‌, ಚನ್ನಬಸಪ್ಪ ಮೊಖಾಶಿ, ಬಸನಗೌಡ ಕೊಳದೂರ, ಸಂದೀಪ ದೇಶಪಾಂಡೆ, ಶ್ರೀಕರ ಕುಲಕರ್ಣಿ, ಉಳವಪ್ಪ ಉಳ್ಳಾಗಡ್ಡಿ, ಅರವಿಂದ ಪಾಟೀಲ, ಬಸನಗೌಡ ಸಿದ್ರಾಮನಿ ಇತರರು ಉಪಸ್ಥಿತರಿದ್ದರು.

ಬಿಜೆಪಿ ಮಂಡಳ ಅಧ್ಯಕ್ಷ ಬಸವರಾಜ ಪರವಣ್ಣವರ ಸ್ವಾಗತಿಸಿದರು. ಶಿವಾನಂದ ಹನುಮಸಾಗರ ನಿರೂಪಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next