Advertisement

ಕ್ಷೇತ್ರವಾರು ಹೊಣೆಗಾರಿಕೆಗೆ ತೀರ್ಮಾನ

11:05 PM Nov 15, 2019 | Team Udayavani |

ಬೆಂಗಳೂರು: ಉಪ ಚುನಾವಣೆಯಲ್ಲಿ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರಿಗೆ ಕ್ಷೇತ್ರವಾರು ಹೊಣೆಗಾರಿಕೆ ನೀಡಲು ಜೆಡಿಎಸ್‌ ಶಾಸಕಾಂಗ ಪಕ್ಷ ತೀರ್ಮಾನಿಸಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸುವ ಪ್ರತಿ ಕ್ಷೇತ್ರಕ್ಕೆ ಮೂವರು ಶಾಸಕರು ಹಾಗೂ ಇಬ್ಬರು ಪರಿಷತ್‌ ಸದಸ್ಯರಿಗೆ ಉಸ್ತುವಾರಿ ವಹಿಸಲು ನಿರ್ಧರಿಸಲಾಯಿತು.

Advertisement

ಯಾವ್ಯಾವ ಕ್ಷೇತ್ರಕ್ಕೆ ಯಾರ್ಯಾರು ಉಸ್ತು ವಾರಿ ಎಂಬುದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಜತೆ ಚರ್ಚಿಸಿ ಶನಿವಾರ ಸಂಜೆ ಅಂತಿಮಗೊಳಿ ಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಉಪ ಚುನಾವಣೆಯಲ್ಲಿ ನಾವು ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷದ ವಿರುದ್ಧ ಹೋರಾಟ ಮಾಡಬೇಕು. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳಲು ಶ್ರಮ ಹಾಕಲೇಬೇಕು ಎಂದು ಹೇಳಿದರು.

ಉಪ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗಲಿದ್ದು, ಜೆಡಿಎಸ್‌ಗೆ ಉತ್ತಮ ಭವಿಷ್ಯ ಇದೆ. ಉಪ ಚುನಾವಣೆ ನಂತರದ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷವು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಹೀಗಾಗಿ, ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next