Advertisement
ಹಿಜಾಬ್‌ಗ ಅವಕಾಶ ಕಲ್ಪಿಸಿದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎಂದು ಹೇಳಿದ ನಗರ ಭಾಗದ ಖಾಸಗಿ ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕುಂದೇಶ್ವರ ದೇವಸ್ಥಾನದಿಂದ ಶಾಸಿŒ ಸರ್ಕಲ್ ಮೂಲಕ ಕಾಲೇಜಿನ ವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದರು. ಕೇಸರಿ ಶಾಲು ತೆಗೆದರೆ ಮಾತ್ರ ಅವಕಾಶ ಎಂದಾಗ ಎಲ್ಲರು ಶಾಲು ತೆಗೆದಿರಿಸ ಒಳಗೆ ತೆರಳಿದರು.
ಇದೇ ಕಾಲೇಜಿನ ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಬೇಕು ಎಂದು ಒಂದಷ್ಟು ವಿದ್ಯಾರ್ಥಿನಿಯರು, ಅವರ ಪೋಷಕರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಪೋಷಕರು, ನಮಗೆ ಕಾಲೇಜು ಕಡೆಯಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದರು. ಇತ್ತ ಮನವಿ ಸ್ವೀಕರಿಸಿದ ಪ್ರಾಂಶುಪಾಲರು, ಈ ವಿಚಾರವನ್ನು ಕಾಲೇಜಿನ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ:ವಿವಾದದ ನಡುವೆಯೇ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದ ಸರಕಾರ
Related Articles
ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿಗೆ ಹಿಂದಿನ ದಿನವೇ ಶನಿವಾರ ರಜೆಯೆಂದು ಘೋಷಿಸಲಾ ಗಿತ್ತು. ಕುಂದಾಪುರದ ಖಾಸಗಿ ಕಾಲೇ ಜೊಂದರಲ್ಲಿ ಶನಿವಾರ ವಿದ್ಯಾರ್ಥಿಗಳು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬಂದಿದ್ದರಿಂದ ಕಾಲೇಜಿಗೆ ರಜೆ ನೀಡಲಾಯಿತು. ಗಂಗೊಳ್ಳಿ, ನಾವುಂದ ಸರಕಾರಿ ಪ.ಪೂ. ಕಾಲೇಜಿಗೂ ಶನಿವಾರ ರಜೆ ನೀಡಲಾಯಿತು.
Advertisement
ಬಿಗಿ ಭದ್ರತೆನಗರದಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಹಿಜಾಬ್, ಕೇಸರಿ ಶಾಲಿಗೆ ಅವಕಾಶವಿಲ್ಲ
ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಶನಿವಾರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ನಿರ್ದೇಶನದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಗೇಟು ದಾಟಲು ಅವಕಾಶವಿಲ್ಲ ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾಲೇಜಿನ ಅಭಿವೃದ್ಧಿ ಸಮಿತಿ ತಿಳಿಸಿದೆ.