ಬೆಂಗಳೂರು: ತಜ್ಞರ ಜೊತೆಗೆ ಚರ್ಚೆ ನಡೆಸಿದ್ದೇವೆ. ಒಮಿಕ್ರಾನ್ ಬಗ್ಗೆ ವಿವರಣೆ ನೀಡಿದ್ದಾರೆ. ಈಗಿರುವ ಪಾಸಿಟಿವ್ ಪ್ರಕರಣಗಳಿಂದ ಗಾಬರಿಯಾಗುವುದು ಬೇಡವೆಂದು ಹೇಳಿದ್ದಾರೆ. ಆದರೆ ಮುನ್ನೆಚ್ಚರಿಕೆ ತಗೆದುಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಕ್ರಿಸ್ಮಸ್, ಹೊಸ ವರ್ಷದ ಬಗ್ಗೆ ಒಂದು ವಾರ ನೋಡಿಕೊಂಡು ನಿರ್ಧಾರ ಮಾಡಲಾಗುತ್ತದೆ ಎಂದರು.
ಹಾಸ್ಟೆಲ್ ಗೆ ಮಾರ್ಗಸೂಚಿ ನೀಡಿದ್ದೇವೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ. ಅಲ್ಲಿನ ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಬೇಕು. ಮೂರು ಜನರಿಗೆ ಕೋವಿಡ್ ಪಾಸಿಟಿವ್ ಆದರೂ ಕ್ಲಸ್ಟರ್ ಮಾಡಲು ನಿರ್ಧಾರ ಮಾಡಿದ್ದೇವೆ ಎಂದರು.
ಇದನ್ನೂ ಓದಿ:ಜರ್ಮನಿಯಿಂದ ಬೆಂಗಳೂರಿಗೆ ಬಂದ ಕೋವಿಡ್ ಸೋಂಕಿತ ಪರಾರಿ : ಸೋಂಕಿತ ನಾಪತ್ತೆಯಿಂದ ಆತಂಕ ಸೃಷ್ಟಿ
ವ್ಯಾಕ್ಸಿನ್ ಡ್ರೈವ್ ಮಾಡಲು ನಿರ್ಧಾರ ಮಾಡಲಾಗಿದೆ. ಲಸಿಕೆ ಪಡೆಯದವರಿಗೆ ಲಸಿಕೆ ಹಾಕಿಸಲಾಗುವುದು. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರವಿದೆ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.