Advertisement

25 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಿರ್ಧಾರ

12:39 AM Jul 27, 2019 | mahesh |

ಹೊಸದಿಲ್ಲಿ: ಈ ವರ್ಷದ ಆರಂಭದಲ್ಲಿ ದೇಶದ 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಿದ್ದ ಕೇಂದ್ರ ಸರಕಾರ, ಸದ್ಯದಲ್ಲೇ 20ರಿಂದ 25 ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಹೊಸದಿಲ್ಲಿಯಲ್ಲಿ ಈ ವಿಚಾರ ತಿಳಿಸಿದ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಮುಖ್ಯಸ್ಥ ಗುರು ಪ್ರಸಾದ್‌ ಮೊಹಾಪಾತ್ರ, ವಾರ್ಷಿಕ 10 ಲಕ್ಷದಿಂದ 15 ಲಕ್ಷ ಪ್ರಯಾಣಿಕರ ಓಡಾಟವಿರುವ ವಿಮಾನ ನಿಲ್ದಾಣ ಗಳನ್ನು ಖಾಸಗೀಕರಣಗೊಳಿಸಲಾಗುತ್ತದೆ ಎಂದಿದ್ದಾರೆ.

Advertisement

ಖಾಸಗಿ ಸಹಭಾಗಿತ್ವದಡಿಯಲ್ಲಿ ವಿಮಾನ ನಿಲ್ದಾಣಗಳ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಫೆಬ್ರವರಿಯಲ್ಲಿ, ಲಕ್ನೋ, ಅಹ್ಮದಾಬಾದ್‌, ಜೈಪುರ, ಮಂಗಳೂರು, ತಿರುವನಂತಪುರಂ ಹಾಗೂ ಗುವಾಹಟಿ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next