Advertisement

ಯಾದಗಿರಿ: ಶರಣರ ಜಯಂತಿ ಸರಳ ಆಚರಣೆಗೆ ನಿರ್ಧಾರ

06:44 PM Jan 15, 2021 | Team Udayavani |

ಯಾದಗಿರಿ: ಕೋವಿಡ್‌-19 ಹಿನ್ನೆಲೆಯಲ್ಲಿ ಜ.19ರಂದು ಮಹಾಯೋಗಿ ವೇಮನ, ಜ.21ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲು ಅಪರ ಜಿಲ್ಲಾಧಿ ಕಾರಿ ಪ್ರಕಾಶ್‌ ಜಿ.ರಜಪೂತ್‌ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಹಾಯೋಗಿ ವೇಮನ ಜಯಂತಿ ಸೇರಿದಂತೆ ಜನವರಿ ತಿಂಗಳಲ್ಲಿ ನಡೆಯುವ ಎಲ್ಲಾ ಜಯಂತಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುತ್ತದೆ ಎಂದರು.

ಈ ಜಯಂತಿಗಳ ಸಂದರ್ಭದಲ್ಲಿ ಯಾವುದೇ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್‌-19 ಸುರಕ್ಷತಾ
ಕ್ರಮದೊಂದಿಗೆ ಸರಳವಾಗಿ ಆಚರಿಸಬೇಕು.

ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್‌ ಉಪಯೋಗಿಸಬೇಕು. ಅಲ್ಲದೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಣೆ ಮಾಡಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ ಹಾಗೂ ವಿವಿಧ ಸಮಾಜದ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next