Advertisement

ಪಾಲಿಕೆ, ಎನ್‌ಐಟಿಕೆಯಿಂದ ಸ್ಮಾರ್ಟ್‌ಸಿಟಿ ಕಾಮಗಾರಿ ಪರಿಶೀಲನೆಗೆ ನಿರ್ಧಾರ

11:35 PM Dec 16, 2019 | Team Udayavani |

ಮಹಾನಗರ: ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ಈಗಾಗಲೇ ಕೈಗೊಳ್ಳಲಾಗಿರುವ ಎಲ್ಲ ರೀತಿಯ ಕಾಮಗಾರಿಗಳನ್ನು ಮಹಾನಗರ ಪಾಲಿಕೆ, ಎನ್‌.ಐ.ಟಿ.ಕೆ.ಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆ ಒಳಪಡಿಸಲು ಸೋಮವಾರ ನಿರ್ಧರಿಸಲಾಗಿದೆ.

Advertisement

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸೋಮವಾರ ಮಂಗಳೂರು ಪಾಲಿಕೆಯಲ್ಲಿ ನಡೆದ ಸ್ಮಾರ್ಟ್‌ಸಿಟಿ ಅನುಷ್ಠಾನ ಮತ್ತು ಪರಿಶೀಲನ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸ್ಮಾರ್ಟ್‌ಸಿಟಿ ಒಂದು ನಿಗದಿತ ಅವಧಿಯ ಯೋಜನೆ ಯಾಗಿರುವುದರಿಂದ ಎಲ್ಲ ಕಾಮಗಾರಿಗಳು ಮುಕ್ತಾಯವಾದ ಬಳಿಕ ಮಹಾನಗರ ಪಾಲಿಕೆಗೆ ಹಸ್ತಾಂತರವಾಗಬೇಕು. ಅನಂತರ ಯಾವುದೇ ಲೋಪದೋಷಗಳು ಉಂಟಾಗದಂತೆ, ಪಾಲಿಕೆಗೆ ವಹಿಸುವ ಮೊದಲೇ ಕಾಮಗಾರಿಯ ಗುಣಮಟ್ಟ ಪರಿಶೀಲಿಸಬೇಕು ಎಂದರು.

ಮಂಗಳೂರು ಸ್ಮಾರ್ಟ್‌ಸಿಟಿ ಲಿ. ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್‌ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಂಡ ಅನಂತರ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಮೊದಲು ಪಾಲಿಕೆ, ಎನ್‌.ಐ.ಟಿ.ಕೆ. ಸಂಸ್ಥೆಯಿಂದ ಸಮಾನಾಂತರವಾಗಿ ಪರಿಶೀಲನೆ ನಡೆಸಲಾಗುವುದು ಎಂದರು.

ಸಾರ್ವಜನಿಕ ಹಿತಾಸಕ್ತಿ ಮುಖ್ಯ
ಸ್ಮಾರ್ಟ್‌ಸಿಟಿಯಲ್ಲಿ ಕೈಗೊಳ್ಳಲಾಗುವ ಯೋಜನೆಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರಬೇಕು ಎಂದು ತಿಳಿಸಿದ ಸಚಿವರು, ಕಾಮಗಾರಿಗಳ ಅನುಷ್ಠಾನ ಸಂದರ್ಭ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗುವಂತೆ ಕಾಮಗಾರಿ ನಡೆಸಬೇಕು. ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ನಡೆಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಯೋಜನೆಯ ಸಂಪೂರ್ಣ ವಿವರ, ವೆಚ್ಚ ಹಾಗೂ ಗುತ್ತಿಗೆದಾರರ ವಿವರಗಳನ್ನೊಳಗೊಂಡ ಮಾಹಿತಿ ಫಲಕ ಅಳವಡಿಸಲು ಸೂಚಿಸಿದರು.

Advertisement

ನಗರದ ಆರ್‌ಟಿಒ ಸರ್ಕಲ್‌ನಿಂದ ಗಡಿಯಾರ ಗೋಪುರದವರಗೆ ರಸ್ತೆ ಅಭಿ ವೃದ್ಧಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಗುತ್ತಿಗೆದಾರರು ನಿಗದಿತ ಅವಧಿಯೊಳಗೇ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಲು ತಾಕೀತು ಮಾಡಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಗಳು ಅನುಷ್ಠಾನ ಸಂದರ್ಭದಲ್ಲಿ ಪಾಲಿಕೆ, ಸ್ಮಾರ್ಟ್‌ಸಿಟಿ ಸಂಸ್ಥೆ ನಡುವೆ ಹೊಂದಾಣಿಕೆ ಇಲ್ಲದೇ ಕೆಲವು ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗಿವೆ. ಸಾರ್ವಜನಿಕರಿಗೆ ಉಪ ಯೋಗವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿ ರುವುದರಿಂದ ಇಂತಹ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣ ಗೊಳಿಸಬೇಕು.

ಸ್ಮಾರ್ಟ್‌ ಬಸ್‌ ತಂಗುದಾಣ ವಿನ್ಯಾಸ, ಯೋಜನ ವೆಚ್ಚದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನ ಇದ್ದು, ಈ ಬಗ್ಗೆ ಜನತೆಗೆ ಉತ್ತರಿಸಲಾಗದ ಪರಿಸ್ಥಿತಿ ಇದೆ ಎಂದರು ಡಿಸಿ ಸಿಂಧೂ ಬಿ. ರೂಪೇಶ್‌, ಮನಪ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಮತ್ತಿತರರಿದ್ದರು.

ಮಿಷನ್‌ ಸ್ಟ್ರೀಟ್‌ನಲ್ಲಿ ಒಳಚರಂಡಿ ಕಾಮಗಾರಿ
ಮಂಗಳೂರು ಸ್ಮಾರ್ಟ್‌ಸಿಟಿ ವ್ಯವ ಸ್ಥಾಪಕ ನಿರ್ದೇಶಕ ಮುಹಮ್ಮದ್‌ ನಝೀರ್‌ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಈಗಾಗಲೇ ಸ್ಮಾರ್ಟ್‌ ರಸ್ತೆಯಲ್ಲಿ ಬರುವ ಸರಕಾರಿ ಕಚೇರಿಗಳಿಗೆ ಎಲ್‌ಇಡಿ ಲೈಟ್‌ ದೀಪಗಳ ಅಳವಡಿಕೆ, ಹಂಪನಕಟ್ಟೆಯಲ್ಲಿ ಗಡಿಯಾರ ಗೋಪುರ ನಿರ್ಮಾಣ ಪೂರ್ಣಗೊಂಡಿದೆ. ಆರ್‌ಟಿಒ ಸರ್ಕಲ್‌ನಿಂದ ಗಡಿಯಾರ ಗೋಪುರದವರಗೆ ರಸ್ತೆ ಅಭಿವೃದ್ಧಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಜನವರಿ 30ರೊಳಗೆ ಪೂರ್ಣಗೊಳ್ಳಲಿದೆ. ವಲಯ 4ರಲ್ಲಿ ಒಳಚರಂಡಿ ಯೋಜನೆ ಪ್ರಗತಿಯಲ್ಲಿದೆ. ನೆಲ್ಲಿಕಾಯಿ ರಸ್ತೆ ಕಾಮಗಾರಿ ಮುಕ್ತಾಯಗೊಂಡಿದ್ದು ಮಿಷನ್‌ ಸ್ಟ್ರೀಟ್‌ ರಸ್ತೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಗರದ ವಿವಿಧೆೆಡೆ 14 ಸ್ಮಾರ್ಟ್‌ ಬಸ್‌ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಕಾಮ ಗಾರಿ ಗಳನ್ನು ಲೋಕೋಪಯೋಗಿ ಇಲಾ ಖೆಯ ಎಸ್‌.ಆರ್‌. ದರದಂತೆ ನಡೆಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next