Advertisement

ನೀತಿ ಸಂಹಿತೆ ಅನ್ವಯ ಜಯಂತ್ಯೋತ್ಸವ ಆಚರಿಸಲು ನಿರ್ಧಾರ

11:44 AM Mar 20, 2018 | Team Udayavani |

ಕಲಬುರಗಿ: ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಜಯಂತ್ಯುತ್ಸವ ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಏಪ್ರಿಲ್‌ 5 ಮತ್ತು 14ರಂದು ಚುನಾವಣಾ ನೀತಿ ಸಂಹಿತೆ ಅನ್ವಯ ಆಚರಿಸಲು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

Advertisement

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಘೋಷಿಸಬಹುದಾಗಿದೆ. ನೀತಿ ಸಂಹಿತೆ ಸಮಯದಲ್ಲಿ ಸರ್ಕಾರಿ ಸಭೆ ಸಮಾರಂಭಗಳನ್ನು ನೀತಿ ಸಂಹಿತೆಗೆ ಅನುಗುಣವಾಗಿ ನಡೆಸಲಾಗುವುದು. ಜಯಂತಿ ಆಚರಣಾ ಸಮಿತಿಗಳು ಯಾವುದೇ ಖಾಸಗಿ ಕಾರ್ಯಕ್ರಮ ನಡೆಸುವವರಿದ್ದರೆ ಮುಂಚಿತವಾಗಿಯೇ
ಚುನಾವಣಾ ಅಧಿಕಾರಿಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಡಾ| ಬಾಬು ಜಗಜೀವನರಾಂ ಅವರ 111ನೇ ಜಯಂತ್ಯುತ್ಸವದ ಅಂಗವಾಗಿ ಏಪ್ರಿಲ್‌ 5 ರಂದು ಬೆಳಗ್ಗೆ 9:00ರಿಂದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದವರೆಗೆ ಬಾಬು ಜಗಜೀವನರಾಂ ಭಾವಚಿತ್ರದ ಮೆರವಣಿಗೆ ಆಯೋಜಿಸಲಾಗುವುದು. ಮೆರವಣಿಗೆ ನಡೆಯುವ ಮಾರ್ಗದಲ್ಲಿ ನೀರು ಸಿಂಪಡಿಸುವ, ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಮತ್ತು ಪೂರ್ಣ ಕುಂಭ ಕಲಶದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಯಿತು. ನಂತರ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಜಯಂತ್ಯುತ್ಸವದ ಮುಖ್ಯ ಸಮಾರಂಭ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಅದೇ ರೀತಿ ಏಪ್ರಿಲ್‌ 14ರಂದು ಬೆಳಗ್ಗೆ ಜಗತ್‌ ವೃತ್ತದ ಬಳಿಯ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಯ ಬಳಿ 127ನೇ ಜಯಂತ್ಯುತ್ಸವದ ಅಂಗವಾಗಿ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಗೆ ಅಂದು ಬೆಳಗ್ಗೆ 8:00ಕ್ಕೆ ಮಾಲಾರ್ಪಣೆ ಬಳಿಕ ಜಯಂತ್ಯುತ್ಸವದ ಸಮಾರಂಭ ನಡೆಯುವುದು. 

ಎರಡೂ ಜಯಂತಿಗಳ ಆಚರಣೆಗೆ ಸಂಬಂಧಿಸಿದಂತೆ ರಚಿಸಲಾದ ಎಲ್ಲ ಉಪಸಮಿತಿಗಳಿಗೆ ವಹಿಸಲಾದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಅತ್ಯಂತ ಜವಾಬ್ದಾರಿಯಿಂದ ಕೈಗೊಳ್ಳಬೇಕು. ಜ¿ಚುಂತಿ ಆಚರಣೆ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್‌ ಅಲಂಕಾರ, ಧ್ವನಿವರ್ಧಕ, ಸ್ವತ್ಛತೆ ಮತ್ತು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

Advertisement

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಏಪ್ರಿಲ್‌ 5ರಂದು ಬಾಬು ಜಗಜೀವನರಾಂ ಮತ್ತು ಏಪ್ರಿಲ್‌ 14ರಂದು ಡಾ| ಬಾಬಾಸಾಹೇಬ ಅಂಬೇಡ್ಕರ್‌ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿ ಮುಖ್ಯ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಂದೇನವಾಜ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಯಂತ್ಯುತ್ಸವ ಆಚರಣೆ ಸಮಿತಿ ಅಧ್ಯಕ್ಷರು, ಪದಾಧಿ ಕಾರಿಗಳು, ಹಲವಾರು ಮುಖಂಡರು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next