Advertisement

ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲು ನಿರ್ಧಾರ

02:58 PM Oct 26, 2018 | Team Udayavani |

ಕಲಬುರಗಿ: ನಗರದಲ್ಲಿ 63ನೇ ಕರ್ನಾಟಕ ರಾಜ್ಯೋತ್ಸವವನ್ನು ನ. 1 ರಂದು ಜಿಲ್ಲೆಯಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸೂಚಿಸಿದರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಿ ನಗರೇಶ್ವರ ಪ್ರೌಢಶಾಲೆಯಲ್ಲಿ ಬೆಳಗ್ಗೆ 8:30 ಕ್ಕೆ ತಾಯಿ ಭುವನೇಶ್ವರಿ ಭಾವಚಿತ್ರದ ಪೂಜೆ ಹಾಗೂ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು ಎಂದರು.

Advertisement

ನಾಡದೇವಿ ತಾಯಿ ಭುವನೇಶ್ವರಿ ಭಾವಚಿತ್ರದ ಬೃಹತ್‌ ಮೆರವಣಿಗೆಯನ್ನು ನೆಹರು ಗಂಜ್‌ನ ನಗರೇಶ್ವರ ಪ್ರೌಢಶಾಲೆಯಿಂದ ಡಾ| ಎಸ್‌.ಎಂ. ಪಂಡಿತ ರಂಗಮಂದಿರವರೆಗೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೃಷಿ, ತೋಟಗಾರಿಕೆ, ಅರಣ್ಯ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ, ಆರೋಗ್ಯ, ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆ ಸ್ತಬ್ದಚಿತ್ರ ನಿರ್ಮಿಸಬೇಕು. ಸ್ತಬ್ದಚಿತ್ರಗಳು ಜನರನ್ನು
ಆಕರ್ಷಿಸುವಂತಾಗಬೇಕು ಎಂದರು. 

ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾ ತಂಡಗಳನ್ನು ನಿಯೋಜಿಸಬೇಕು. ಮೆರವಣಿಗೆಯುದ್ದಕ್ಕು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯೋತ್ಸವದ ಮುನ್ನಾದಿನ ಹಾಗೂ ರಾಜ್ಯೋತ್ಸವ ದಿನದಂದು ಪಾಲಿಕೆಯಿಂದ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಭವನ, ಡಾ| ಎಸ್‌.ಎಂ. ಪಂಡಿತ ರಂಗಮಂದಿರ, ಪಾಲಿಕೆ ಕಚೇರಿಗಳನ್ನು, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಮತ್ತು ಜಗತ್‌ ವೃತ್ತಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಬೇಕು. ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಗಳಿಗೆ ದೀಪಾಲಂಕಾರಗೊಳಿಸಲು ಮನವೋಲಿಸಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜಾ ಪಿ. ಮಾತನಾಡಿ, ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೆ ಡಾ| ಎಸ್‌. ಎಂ.ಪಂಡಿತ ರಂಗಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕಲ್ಲದೇ ರಾಜ್ಯದ ಮತ್ತು ಹೈದ್ರಾಬಾದ ಕರ್ನಾಟಕ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚುಕಟ್ಟಾಗಿ ಆಯೋಜಿಸಬೇಕು ಎಂದರು.

Advertisement

ಮಹಾನಗರ ಪಾಲಿಕೆ ಆಯುಕ್ತ ಆರ್‌. ಎಸ್‌. ಪೆದ್ದಪ್ಪಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೋಟ್ರೇಶ ಮರಬನಳ್ಳಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next