ಚಿತ್ರದುರ್ಗ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ. 13 ರಂದು ಜಿಲ್ಲಾ ಕೇಂದ್ರದಲ್ಲಿವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಬೆಳಿಗ್ಗೆ 9:30ಕ್ಕೆ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರೆವಣಿಗೆ ನಗರದ ಕನಕ ವೃತ್ತದಿಂದ ಆರಂಭವಾಗಲಿದೆ. ಗಾಂಧಿ ವೃತ್ತ ಮಾರ್ಗವಾಗಿ ಮದಕರಿ ವೃತ್ತದವರೆಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆ.
ಮಧ್ಯಾಹ್ನ 1 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರು ನ್ಯಾಷನಲ್ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ. ಅನ್ನಪೂರ್ಣ ಅವರನ್ನು ವಿಶೇಷ ಉಪನ್ಯಾಸಕ್ಕಾಗಿ ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದರು. ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಡೆಯುವ ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ವೇದಿಕೆ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿ ಗಳನ್ನು ಆಹ್ವಾನಿಸಬೇಕು. ವೇದಿಕೆಯಲ್ಲಿ ಸೂಕ್ತ ಆಸನದ ವ್ಯವಸ್ಥೆ, ಕಾರ್ಯಕ್ರಮದಲ್ಲಿಪಾಲ್ಗೊಳ್ಳುವ ಜನರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಅಲಂಕಾರ ಸೇರಿದಂತೆ ಕಾರ್ಯಕ್ರಮದಲ್ಲಿ ಅಚ್ಚುಕಟ್ಟುತನ ಇರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.