ಬೆಂಗಳೂರು: “ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಲೋಕಸಭಾ ಚುನಾವಣೆ ಎದುರಿಸಲು ನಿರ್ಧರಿಸಿದ್ದು, ಕ್ಷೇತ್ರಗಳ ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನೂತನ ಬೆಂಗಳೂರು ಧರ್ಮಾಧ್ಯಕ್ಷ ಪೀಟರ್ ಮಚಾಡೊ ಅವರನ್ನು ಭೇಟಿ ಮಾಡಿ ನಂತರ ಮಾತನಾಡಿದ ಅವರು, ಎರಡೂ ಪಕ್ಷಗಳು ಯಾವ ಕ್ಷೇತ್ರಗಳಲ್ಲಿ ಪ್ರಭಲವಾಗಿರುತ್ತವೆಯೋ ಆ ಕ್ಷೇತ್ರಗಳನ್ನು ಗೊಂದಲ ಇಲ್ಲದೇ ಹಂಚಿಕೆ ಮಾಡಿಕೊಳ್ಳಲಿವೆ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರದಲ್ಲಿ ಎರಡೂ ಪಕ್ಷಗಳು ಕೊಟ್ಟು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದಟಛಿರಾಗಿರಬೇಕೆಂದು ಮಾತನಾಡಿಕೊಂಡಿದ್ದೇವೆ. ಸಂಪುಟದ ಎಲ್ಲ ಸ್ಥಾನಗಳನ್ನು ಭರ್ತಿ ಮಾಡದೆ ಕೆಲವು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ನನಗಿಂತಲೂ ಸಮರ್ಥವಾಗಿ ಅಧ್ಯಕ್ಷ ಸ್ಥಾನ ನಿಭಾಯಿಸುವವರು ಪಕ್ಷದಲ್ಲಿದ್ದಾರೆ. ಹೈಕಮಾಂಡ್ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿದ ತಕ್ಷಣ ಸ್ಥಾನ ಬಿಟ್ಟುಕೊಡಲಿದ್ದೇನೆ ಎಂದರು.
ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಗೌರಿ ಲಂಕೇಶ್ ಹತ್ಯೆ ಬಗ್ಗೆ ಪೊಲಿಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ತಿಳಿಸಿದರು.ಸಿಬಿಐ ಅಧಿಕಾರಿಗಳು ಡಿ.ಕೆ. ಸುರೇಶ್ ಹೆಸರು ಹೇಳುವಂತೆ ಒತ್ತಾಯ ಮಾಡುವುದು ಸರಿಯಲ್ಲ ಎಂದು ಹೇಳಿದರು.