Advertisement

ವೇತನಕ್ಕಾಗಿ ಉಗ್ರ ಹೋರಾಟ ನಡೆಸಲು ನಿರ್ಧಾರ

05:29 PM Aug 04, 2019 | Team Udayavani |

ಹರಪನಹಳ್ಳಿ: ತಾಲೂಕು ದಾವಣಗೆರೆ ಜಿಲ್ಲೆಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ಆರೋಗ್ಯ, ಮೀನುಗಾರಿಕೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮತ್ತು ಸಿಬ್ಬಂದಿ ಕಳೆದ ಐದು ತಿಂಗಳಿಂದ ವೇತನ ಇಲ್ಲದೆ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದ್ದು ಉಗ್ರ ಚಳುವಳಿ ನಡೆಸಲು ನಿರ್ಧರಿಸಲಾಗಿದೆ. ವೇತನ ಬಿಡುಗಡೆಗೆ ಒತ್ತಾಯಿಸಿ ಕಳೆದ ಜು. 24ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಆರೋಗ್ಯ ಇಲಾಖೆಯವರು ಧರಣಿ ನಡೆಸಿದ್ದರೂ ಕೂಡ ಇಲಾಖೆಗಳು ವೇತನವನ್ನು ನೀಡಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆಗಳಿಗೆ ಬಳ್ಳಾರಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಸಂಪರ್ಕ ಮಾಡಿದರೂ ಕೂಡ ಯಾವುದೇ ಸ್ಪಂದನೆ ಸಿಕ್ಕಿಲ್ಲ ಹಾಗಾಗಿ ಮುಂದಿನ ದಿನಗಳಲ್ಲಿ ಉಗ್ರವಾದ ಚಳುವಳಿ ಹಮ್ಮಿಕೊಳ್ಳಲು ಶನಿವಾರ ನಡೆದ ಸಂಘ ಸಭೆಯಲ್ಲಿ ನಿರ್ಧರಿಸಲಾಗಿದೆ.

Advertisement

ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಲಿಂಗನಗೌಡ, ರಾಜ್ಯ ಪರಿಷತ್‌ ಸದಸ್ಯರಾದ ಬಸವರಾಜ ಸಂಗಪ್ಪನವರ್‌, ಕಾರ್ಯದರ್ಶಿ ವೆಂಕಟೇಶ್‌ ಬಾಗಲಾರ್‌, ಉಪಾಧ್ಯಕ್ಷ ಬಿ.ರುದ್ರಾಚಾರಿ, ಸಂಘಟನಾ ಕಾರ್ಯದರ್ಶಿ ಚನ್ನವ್ವ ಸೋಮನಕಟ್ಟಿ ಹಾಗೂ ಆರೋಗ್ಯ ಇಲಾಖೆ ನೌಕರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next