Advertisement
ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಂತರ ಮಾತನಾಡಿದ ಸಿಎಂ, ರಾಜ್ಯದ ಆರ್ಥಿಕ ಅಭಿವೃದ್ಧಿ ಆಗಬೇಕಾದರೆ ಮೂಲಭೂತ ಸೌಲಭ್ಯಗಳು ಮುಖ್ಯ.ಇದರಿಂದ ಆರ್ಥಿಕ ಬೆಳವಣಿಗೆ ಸಹ ಆಗುತ್ತದೆ. 3500 ಕಿ.ಮೀ. ನಷ್ಟು ರಾಜ್ಯ ಹೆದ್ದಾರಿಗೆ ಅನುಮೋದನೆ ಕೊಟ್ಟಿದ್ದೇವೆ. ಕೇಂದ್ರ ಸರಕಾರ 6 ಸಾವಿರ ಎನ್ ಎಚ್ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದೆ. ಜಿಲ್ಲಾ ಕೇಂದ್ರಗಳಲ್ಲಿ ರಿಂಗ್ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಿದ್ದೇವೆ. ಇತ್ತೀಚಿನ ದಿನಗಳಲ್ಲಿ ಏರ್ ಪೋರ್ಟ್ ಅವಶ್ಯಕವಾಗಿರುವ ವ್ಯವಸ್ಥೆ.ಕೈಗಾರಿಕೆ, ಶಿಕ್ಷಣ, ಆರೋಗ್ಯ ಎಲ್ಲಾ ಬೆಳೆಯಬೇಕು ಅಂದರೆ ಏರ್ ಪೋರ್ಟ್ ಅಗತ್ಯ.ಶಿವಮೊಗ್ಗ, ಬಿಜಾಪುರದಲ್ಲಿ ಏರ್ ಪೋರ್ಟ್ ಕೆಲಸ ನಡೆಯುತ್ತಿದೆ. ರಾಯಚೂರಿನಲ್ಲಿ ಈ ವರ್ಷದಿಂದ ಕಾಮಗಾರಿ ಆರಂಭವಾಗುತ್ತದೆ. ಕಾರವಾರದಲ್ಲಿ ನೇವಿ ಏರ್ ಪೋರ್ಟ್ ಕಾಮಗಾರಿ ನಡೆಯುತ್ತಿದೆ ಎಂದರು.
ಹೆಚ್ಚುವರಿ ಹಣ ಬಿಡುಗಡೆಗೆ ರಾಜ್ಯ ಸರಕಾರ ಅನುಮೋದನೆ ನೀಡಲಿದೆ. ಈ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ವಿಮಾನ ನಿಲ್ದಾಣ ಅಂತಾ ಹೆಸರಿಡಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದರು.