Advertisement
ಇದರಿಂದ ಬಹುತೇಕ ಪ್ರಕರಣಗಳಲ್ಲಿ ನಿಯಮ ಉಲ್ಲಂ ಸಿದ ಚಾಲಕ ಪಾರಾಗುತ್ತಿದ್ದು, ವಾಹನದ ಮಾಲೀಕರಿಗೆ ಅದರ ಬಿಸಿ ತಟ್ಟುತ್ತಿದೆ. ಪದೇ ಪದೇ ಸಂಚಾರ ನಿಯಮ ಉಲ್ಲಂ ಸುವವರನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಡಿಎಲ್ ಸಂಖ್ಯೆ ಆಧರಿಸಿ “ದಂಡ ಪ್ರಯೋಗ’ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಇದರ ಸಹಾಯದಿಂದ ದಂಡದ ಜತೆಗೆ ಈಗಾಗಲೇ ಎಷ್ಟು ಬಾರಿ ಸಂಚಾರ ನಿಯಮ ಉಲ್ಲಂ ಸಿದ್ದಾನೆ ಎಂಬುದರ ಮಾಹಿತಿಯೂ ಲಭ್ಯವಾಗಲಿದೆ. ಇದನ್ನು ಆಧರಿಸಿ ಪೊಲೀಸ್ ಇಲಾಖೆಯು ಅಂತಹ ವ್ಯಕ್ತಿಯ ಡಿಎಲ್ ಅಮಾನತಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲು ಸಾಧ್ಯವಾಗುತ್ತದೆ. ಆದರೆ, ಟಿಂಟೆಡ್ ಗಾಜು ಅಳವಡಿಕೆ ಸೇರಿದಂತೆ ವಾಹನಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಆಯಾ ವಾಹನಗಳ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
Related Articles
Advertisement
2018ರಲ್ಲಿ ಅಪಘಾತ ಪ್ರಮಾಣವನ್ನು ಶೇ. 15ರಷ್ಟು ಕಡಿಮೆ ಮಾಡುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿ. ದಯಾನಂದ ತಿಳಿಸಿದರು. 2017ರಲ್ಲಿ ಅಪಘಾತಗಳ ಪ್ರಮಾಣವನ್ನು ಶೇ. 10ರಷ್ಟು ಕಡಿಮೆ ಮಾಡಿದ್ದು, ಬರುವ ವರ್ಷ ಇದನ್ನು ಶೇ. 15ಕ್ಕೆ ಇಳಿಸುವ ಗುರಿ ಇದೆ.
ಈ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ, ನಿರಂತರ ಕಾರ್ಯಾಚರಣೆ, ಸ್ಥಳೀಯ ಸಂಸ್ಥೆಗಳು ಮತ್ತು ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಗುಂಡಿ ಮುಚ್ಚುವ ಕಾರ್ಯ, ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.