Advertisement
“ಬರ ಪರಿಸ್ಥಿತಿಯಲ್ಲಿ ಬೆಳೆ ಹಾಕಬಾ ರದು’ ಎಂದು ಮನವಿ ಮಾಡಿದ್ದರೂ ಕೆಲವು ರೈತರು ಭತ್ತದ ಬದಲು ಮೆಣಸಿನಕಾಯಿ ಬೆಳೆ ಹಾಕಿಕೊಂಡಿದ್ದಾರೆ. ಈ ಬೆಳೆ ನಾಶವಾದರೆ, 2 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗುವ ಸಾಧ್ಯತೆ ಇದೆ. ಪ್ರತಿಭಟನನಿರತ ರೈತರು ಹಾಗೂ ಶಾಸಕರು ಮನವಿ ಮಾಡಿದ್ದರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ. ತತ್‌ಕ್ಷಣದಿಂದ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನಗಳಲ್ಲಿ ನೀರು ತಲುಪಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರವಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನೀರಿನ ಬಳಕೆ ಮೇಲ್ವಿಚಾರಣೆ ಹೇಗೆ ಎಂದು ಕೇಳಿದಾಗ, ಮೇಲ್ವಿಚಾರಣೆಗೆ ಪೊಲೀಸರನ್ನು ಬಳಸಿಕೊಳ್ಳಲು ಆಗುವು ದಿಲ್ಲ. ಹೀಗಾಗಿ ಈ ಜವಾಬ್ದಾರಿಯನ್ನು ಜನಪ್ರತಿನಿಧಿ ಹಾಗೂ ರೈತ ಸಂಘಟನೆಗಳಿಗೇ ನೀಡಲಾಗಿದೆ. ನೀವೇ ಪೊಲೀಸರಾಗಿ ಈ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕು. ನಮ್ಮ ಅಧಿಕಾರಿ ಗಳಿಗೂ ನಾವು ಸೂಚನೆ ನೀಡಿದ್ದೇವೆ. ಆದರೆ ಅಧಿಕಾರಿಗಳು ರೈತರ ಜತೆ ಜಗಳ ಮಾಡಲು ಆಗುವುದಿಲ್ಲ. ಆ ರೀತಿ ಆದರೆ ಮಾಧ್ಯಮಗಳು ಅದನ್ನೇ ದೊಡ್ಡ ವಿಷಯ ಮಾಡುತ್ತವೆ. ಮಾಧ್ಯಮಗಳು ಕೂಡ ರೈತರ ಜವಾಬ್ದಾರಿ ಬಗ್ಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
Related Articles
ರಾಯಚೂರು/ಬಳ್ಳಾರಿ/ಬಾಗಲಕೋಟೆ: ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಭಾಗಗಳಲ್ಲಿ ಮೆಣಸಿನಕಾಯಿ ಬೆಳೆದಿದ್ದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.
Advertisement
ರಾಯಚೂರು ಜಿಲ್ಲೆಯಲ್ಲಿ ಅಂದಾಜು 15 ಸಾವಿರ ಎಕ್ರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಇನ್ನೂ ಎರಡು ಬಾರಿ ನೀರು ಹರಿಸಿದರೆ ಮಾತ್ರ ಬೆಳೆ ಕೈ ಸೇರಲಿದೆ.
ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೆಳೆಯುವ ರೈತರು ಎಚ್‌ಎಲ್‌ಸಿ ಕಾಲುವೆ ನೀರಿಗಾಗಿ ಶೇ.60, ಎಲ್‌ಎಲ್‌ಸಿ ಕಾಲುವೆ ನೀರಿಗಾಗಿ ಶೇ.25 ಅವಲಂಬಿತರಾಗಿದ್ದಾರೆ. ಸಮರ್ಪಕವಾಗಿ ನೀರು ದೊರೆಯದೆ ಬೆಳೆ ನಷ್ಟವಾಗಿದೆ. ಪ್ರತಿ ಎಕ್ರೆಗೆ 14-16 ಕ್ವಿಂಟಾಲ್ ಬೆಳೆಯುತ್ತಿದ್ದ ಮೆಣಸಿನಕಾಯಿ ಈಗ 6-8 ಕ್ವಿಂಟಾಲ್ ಬೆಳೆದರೂ ಹೆಚ್ಚು ಎಂಬಂತಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಶೇ.76.90ರಷ್ಟು ಬೆಳೆ ಹಾನಿಯಾಗಿದೆ.
ಬಾಗಲಕೋಟೆ, ಹುನಗುಂದ ಹಾಗೂ ಇಳಕಲ್ ತಾಲೂಕಿನಲ್ಲಿ ಈ ಬಾರಿ ಅತಿಹೆಚ್ಚು ಮೆಣಸು ಬೆಳೆಯಲಾಗಿದೆ. ಜಿಲ್ಲೆಯಲ್ಲಿ 21, 816 ಹೆಕ್ಟೇರ್ ಪ್ರದೇಶ ದಲ್ಲಿ ಬಿತ್ತನೆಯಾಗಿದ್ದು, 19,255 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ.