Advertisement

ಎಂಪಿಎಂ ಪುನಶ್ಚೇತನಕ್ಕೆ ನಿರ್ಧಾರ

07:51 AM Jun 07, 2020 | Suhan S |

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಶನಿವಾರ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

Advertisement

ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸ್ಥಗಿತಗೊಂಡಿದ್ದ ಎಂ.ಪಿ.ಎಂ. ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇರುವ ಅರಣ್ಯ ಸಂಪತ್ತನ್ನು ಬಳಸಿಕೊಂಡು ಕಾರ್ಖಾನೆಯನ್ನು ಸುಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಅವರು ಅ ಧಿಕಾರಿಗಳಿಗೆ ಸೂಚಿಸಿದರು. ಕಾರ್ಖಾನೆಯನ್ನು ಪುನರಾರಂಭಿಸುವ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿಗಳ ಗಮನ ಸೆಳೆದು ಒತ್ತಾಯಿಸಿದ್ದರು. ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ , ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್‌ಗದೆ, ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಡಿಸಿಸಿಎಫ್‌ ಸಂಜಯ್‌ ಮೋಹನ್‌, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ ಕೌರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next