Advertisement

ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

07:47 AM Mar 03, 2019 | Team Udayavani |

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. 

ವಾರದೊಳಗೆ ಅಭ್ಯರ್ಥಿ ಘೋಷಣೆ: ಇನ್ನೊಂದು ವಾರದೊಳಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಹೇಳಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರದ ದುಡಾಳಿತದಿಂದ ಜನತೆ ಬೇಸತ್ತಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳುತ್ತಲೇ ಬಂದಿದ್ದರೂ ಈವರೆಗೆ ಯಾವ ರೈತರಿಗೂ ಅದರ ಪ್ರಯೋಜನ ದೊರೆತಿಲ್ಲ ಎಂದು ಕಿಡಿಕಾರಿದರು.

ಮೈತ್ರಿ ನಾಯಕರ ಕಚ್ಚಾಟ: ಜೆಡಿಎಸ್‌-ಕಾಂಗ್ರೆಸ್‌ ನಡುವೆ ಹೊಂದಾಣಿಕೆ ಇಲ್ಲದೆ ಎರಡೂ ಪಕ್ಷಗಳ ಮಂತ್ರಿಗಳು ವ್ಯತಿರಿಕ್ತ ಹೇಳಿಕೆಗಳನ್ನು ನೀಡಿ ಕಚ್ಚಾಡುತ್ತಿದ್ದಾರೆ. ಹೀಗಾಗಿ ರಾಜ್ಯದ ಜನತೆ ಬಿಜೆಪಿ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದು, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳದೆ ಜನತೆ ಅನ್ಯಾಯ ಮಾಡಿದೆ. ಜೊತೆಗೆ ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಬಗ್ಗೆ ರಾಜ್ಯದ ಜನರಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next