Advertisement

ಮೇ 7ರ ಒಳಗಾಗಿ ಅನರ್ಹತೆ ತೀರ್ಪು ನೀಡಿ: ಹೈಕೋರ್ಟ್‌

06:00 AM Apr 25, 2018 | Team Udayavani |

ಬೆಂಗಳೂರು: ಜೆಡಿಎಸ್‌ನ ಏಳು ಮಂದಿ ಬಂಡಾಯ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ನೀಡಲಾಗಿದ್ದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ವಿಧಾನಸಭಾ ಸ್ಪೀಕರ್‌ಗೆ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಪಕ್ಷದ ವಿಪ್‌ ಉಲ್ಲಂಘಿಸಿ ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ ಏಳು ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಾಸಕ ಎಚ್‌.ಸಿ. ಬಾಲಕೃಷ್ಣ ಹಾಗೂ ಬಿ.ಬಿ. ನಿಂಗಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಗಳ ತೀರ್ಪನ್ನು ಮಂಗಳವಾರ ಪ್ರಕಟಿಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್‌. ಚೌಹಾಣ್‌ ಅವರಿದ್ದ ಏಕಸದಸ್ಯ ಪೀಠ, ಈ ನಿರ್ದೇಶನ ನೀಡಿತು.

ಈಗಾಗಲೇ  ಏಳು ಮಂದಿ  ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಸ್ಪೀಕರ್‌ ತೀರ್ಪು ಮಾನ್ಯತೆ ಕಳೆದುಕೊಳ್ಳಲಿದೆ ಎಂಬ ಸರಕಾರದ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ರಾಜೀನಾಮೆ ಸಲ್ಲಿಸಿದ್ದರೂ ಸಂವಿಧಾನದ ಕಲಂ 52ನೇ ತಿದ್ದುಪಡಿ ಅನ್ವಯ ತೀರ್ಪು ಪ್ರಕಟವಾಗಬೇಕು ಎಂದು ಅಭಿಪ್ರಾಯಪಟ್ಟಿತು. ಶಾಸಕರ ವಿರುದ್ಧದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ವಿಧಾನಸಭಾ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರಿಗೆ ನ್ಯಾಯಪೀಠ ನಿರ್ದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next