ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರ ಹಾಗೂ ಉಪಚುನಾವಣೆ ನಡೆಯಲಿರುವ ಸುರಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿರುವ ದಿನಗಳಂದು ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡು ಎಲ್ಲ ರಾಜ್ಯ ಸರಕಾರಿ ಶಾಲಾ ಕಾಲೇಜು, ಸರಕಾರಿ ಕಚೇರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸರ
ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.
ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಎ.26ರ ಶುಕ್ರವಾರ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಮೇ 7 ಮಂಗಳವಾರದಂದು ವೇತನಸಹಿತ ರಜೆ ನೀಡಲು ಅಧಿಸೂಚನೆ ಹೊರಡಿಸಲಾಗಿದೆ.
ಆದರೆ ಈ ರಜೆಯು ತುರ್ತು ಸೇವೆಗಳಿಗೆ ಅನ್ವಯ ಆಗುವುದಿಲ್ಲ. ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ರಾಜ್ಯ ಶಿಷ್ಟಾಚಾರ) ಅಧೀನ ಕಾರ್ಯದರ್ಶಿ ಎಚ್.ಬಿ. ವಿಜಯಕುಮಾರ್ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.