Advertisement

ಆರು ತಿಂಗಳು ಮೊದಲೇ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆ: ಸಿದ್ದರಾಮಯ್ಯ

01:02 PM Apr 23, 2022 | Team Udayavani |

ದಾವಣಗೆರೆ: ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ಹಾಗೂ ಶಾಸಕರು ನಿರ್ಧಾರ ಮಾಡುತ್ತಾರೆ. ಆರು ತಿಂಗಳ ಮೊದಲೇ ಟಿಕೆಟ್ ಘೋಷಣೆಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಗೂ ಮುನ್ನ ಚುನಾವಣೆ ಆಗುವುದಿಲ್ಲ. ನಮಗೂ ಸಹ ರಾಹುಲ್ ಗಾಂಧಿ 150 ಸ್ಥಾನ ಗೆಲ್ಲಲೇ ಬೇಕು ಎಂದಿದ್ದಾರೆ ಎಂದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹುಬ್ಬಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ. ಅಭಿಷೇಕ್ ಹಿರೇಮಠ ಯಾರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ: ಶಾಸಕ ಡಾ.ಜಿ ಪರಮೇಶ್ವರ್

ಉತ್ತರ ಪ್ರದೇಶದಂತೆ ಬೋಲ್ಡೋಜರ್ ವ್ಯವಸ್ಥೆ ತರಬೇಕೆಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಶ್ರೀರಾಮ ಸೇನೆಗೆ ಬೋಲ್ಡೋಜರ್ ಹರಿಸಬೇಕು ಎಂದರು.

Advertisement

ನಾನು ಚುನಾವಣೆ ಮುಗಿಯುವವರೆಗೂ ವಿಶ್ರಾಂತಿಸುವುದಿಲ್ಲ ಎಂಬ ಬಿಎಸ್ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೇಸ್ ಗಳು ಇರುವ ಕಾರಣ ಅವರು ವಿಶ್ರಮಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next