Advertisement

ಘೋಷಿತ ಕಾರ್ಯಕ್ರಮಗಳು ಜಾರಿಯಾಗಲಿ: ಸಿದ್ದರಾಮಯ್ಯ

06:40 AM Jan 20, 2018 | Team Udayavani |

ಬೆಂಗಳೂರು: ರಾಜ್ಯ ಬಜೆಟ್‌ (2018-19) ಸಿದ್ಧತೆಯಲ್ಲಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಇಡೀ ದಿನ ಇಲಾಖಾವಾರು ಸಭೆ ನಡೆಸಿ ಮಾಹಿತಿ ಪಡೆದರು. ಗುರುವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆಗಳೊಂದಿಗೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಿದ್ದ ಮುಖ್ಯಮಂತ್ರಿಯವರು ಎರಡನೇ ದಿನ ಕೆಪಿಸಿ ಭವನದಲ್ಲಿ 11 ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

Advertisement

ಬೆಳಗ್ಗೆ ಅರಮನೆ ಮೈದಾನದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಿ ನಂತರ ಕೆಪಿಸಿ ಭವನದಲ್ಲಿ ತಡರಾತ್ರಿವರೆಗೂ ನಿರಂತರ ಸಭೆ ನಡೆಸಿ ಅಧಿಕಾರಿಗಳಿಂದ ಕಳೆದ ಬಜೆಟ್‌ನ ಪ್ರಗತಿ ಹಾಗೂ ಮುಂದಿನ ಬಜೆಟ್‌ನಲ್ಲಿ ಸೇರಿಸಬಹುದಾದ ಅಂಶಗಳ ಬಗ್ಗೆ ಮಾಹಿತಿ ಪಡೆದರು. ಬಜೆಟ್‌ನಲ್ಲಿ ನಿಗದಿಪಡಿಸಿದ ಅನುದಾನ ಮಾರ್ಚ್‌ ಅಂತ್ಯಕ್ಕೆ ಬಳಕೆಯಾಗಬೇಕು. ನಾವು ಘೋಷಿಸಿದ ಕಾರ್ಯಕ್ರಮಗಳು ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಅರಣ್ಯ-ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಸಾರ್ವಜನಿಕ ಉದ್ದಿಮೆ ಇಲಾಖೆ,ನಗರಾಭಿವೃದ್ಧಿ, ಪೌರಾಡಳಿತ, ಅಲ್ಪಸಂ ಖ್ಯಾತರ ಇಲಾಖೆ (ಹಜ್‌)ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next