Advertisement
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅವರು, ಬ್ಲ್ಯಾಕ್ ಫಂಗಸ್ (ಮ್ಯೂಕರ್ ಮೈಕೊಸಿಸ್) ಮಾರಕ ಕಾಯಿಲೆಯನ್ನು ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ಅದ್ದರಿಂದ ಕರ್ನಾಟಕ ಸರ್ಕಾರವೂ ಈ ಕುರಿತು ಘೋಷಣೆ ಹೊರಡಿಸಬೇಕೆಂದರು.
Related Articles
Advertisement
ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ.
ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಬ್ಲ್ಯಾಕ್ ಜತೆಗೆ ವೈಟ್ ಕಾಟ