ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ಸಚಿವರಿಲ್ಲದೆ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗಿದೆ. ಮುಖ್ಯಮಂತ್ರಿ ಒಬ್ಬರೇ ಇರುವುದರಿಂದ ಏಕವ್ಯಕ್ತಿ ಪ್ರದರ್ಶನದಿಂದ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇಂದ್ರ ಸರ್ಕಾರವು ತಕ್ಷಣ ರಾಜ್ಯದ ನೆರವಿಗೆ ಆಗಮಿಸಬೇಕು. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಐದು ಸಾವಿರ ಕೋಟಿ ರೂ. ತಕ್ಷಣದ ಪರಿಹಾರವಾಗಿ ಬಿಡುಗಡೆ
ಮಾಡಬೇಕೆಂದು ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಸಹ ಬರೆದಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ತಂಡ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ. ಹೀಗಾಗಿ, ರಾಜ್ಯದಲ್ಲಿ ಸಚಿವರು ಇಲ್ಲದ ಕಾರಣ
ಪರಿಹಾರ ಕಾರ್ಯಕ್ಕೆ ತಡೆಯಾಗಿದೆ ಎಂದಿದ್ದಾರೆ.