ನವದೆಹಲಿ: ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಅವರು ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಭಿನ್ನವಾದ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಚಂದ್ರನನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಿ ಮತ್ತು ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಲ್ಯಾಂಡಿಂಗ್ ಸೈಟ್ ಅನ್ನು ಅದರ ರಾಜಧಾನಿಯಾಗಿ ಘೋಷಿಸಿ ಎಂದು ಹೇಳಿದ್ದಾರೆ.
ಇತರ ಧರ್ಮಗಳು ಮತ್ತು ದೇಶಗಳು ತಮ್ಮ ಹಕ್ಕು ಚಲಾಯಿಸುವ ಮೊದಲು ಅದನ್ನು “ಹಿಂದೂ ರಾಷ್ಟ್ರ” ಎಂದು ಘೋಷಿಸಬೇಕು ಅಲ್ಲದೆ ಸಂಸತ್ತಿನಲ್ಲೂ ಈ ನಿಟ್ಟಿನಲ್ಲಿ ನಿರ್ಣಯವನ್ನು ಅಂಗೀಕರಿಸಬೇಕೆಂದು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.
ಕಳೆದ ವಾರ ಇಸ್ರೋದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಐತಿಹಾಸಿಕ ಸಾಫ್ಟ್ ಲ್ಯಾಂಡಿಂಗ್ ಮಾಡಿದ ನಂತರ, ಲ್ಯಾಂಡರ್ ಸ್ಪರ್ಶಿಸಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಈ ಹಿನ್ನೆಲೆಯಲ್ಲಿ ಟ್ವಿಟರ್ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡ ಸಾಮೀಜಿಗಳು ”ವೀಡಿಯೊದಲ್ಲಿ, ಚಂದ್ರಯಾನ-3 ರ ಲ್ಯಾಂಡಿಂಗ್ ಪ್ರದೇಶಕ್ಕೆ “ಶಿವಶಕ್ತಿ ಪಾಯಿಂಟ್” ಎಂದು ಹೆಸರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಚಂದ್ರನ ಮೇಲೆ ಹಿಂದೂ ರಾಷ್ಟ್ರವನ್ನು ಸ್ಥಾಪಿಸಿದ ನಂತರ ಅದನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.
“ಸಂಸತ್ತಿನಿಂದ ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು, ಚಂದ್ರಯಾನ 3 ಇಳಿಯುವ ಸ್ಥಳದಲ್ಲಿ ಶಿವಶಕ್ತಿ ಪಾಯಿಂಟ್ ಅನ್ನು ಅದರ ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Nuh On High Alert: ಹಿಂದೂ ಸಂಘಟನೆಯಿಂದ ಶೋಭಾ ಯಾತ್ರೆ… ಪೊಲೀಸರಿಂದ ಬಿಗಿ ಭದ್ರತೆ